ಬುಧವಾರ, ಜುಲೈ 28, 2021
26 °C

ಚಿತ್ರದುರ್ಗ: ಮೂವರಿಗೆ ಕೋವಿಡ್-19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೋವಿಡ್‌ ಅಂಟಿರುವುದು ಬುಧವಾರ ದೃಢಪಟ್ಟಿದ್ದು, ಕೊರೊನಾ ಸೋಂಕಿತರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗದ 38 ವರ್ಷದ ವ್ಯಕ್ತಿ, 47 ಪುರುಷ ಹಾಗೂ 55 ವರ್ಷದ ಪುರುಷರು ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇವರು ಸೋಂಕಿತರ ಪ್ರಾಥಮಿಕ ಸಂಪರ್ಕಿತರು ಹಾಗೂ ಬೆಂಗಳೂರಿನಿಂದ ಮರಳಿದವರು ಎಂದು ಗೊತ್ತಾಗಿದೆ.

ಬುಧವಾರ 320 ಜನರ ಗಂಟಲು, ಮೂಗು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 317 ಜನರಿಗೆ ನೆಗೆಟಿವ್‌ ವರದಿ ಬಂದಿದೆ. ಸೋಂಕಿತರ ಪೈಕಿ ಈಗಾಗಲೇ 83 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 48 ಸಕ್ರಿಯ ಪ್ರಕರಣಗಳಿವೆ. ಇಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

48 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್ ಆಸ್ಪತ್ರೆಯಲ್ಲಿ 14, ಭರಮಸಾಗರದಲ್ಲಿ 2, ಹಿರಿಯೂರು ತಾಲ್ಲೂಕು ಧರ್ಮಪುರದಲ್ಲಿ 5, ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿಯಲ್ಲಿ 2, ಪರಶುರಾಂಪುರದಲ್ಲಿ 2, ಮೊಳಕಾಲ್ಮೂರು ತಾಲ್ಲೂಕು ರಾಂಪುರದಲ್ಲಿ 2, ಹೊಳಲ್ಕೆರೆ ತಾಲ್ಲೂಕು ಬಿ.ದುರ್ಗದಲ್ಲಿ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲಿ 32 ಕಂಟೈನ್ಮೆಂಟ್ ವಲಯಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು