ಶನಿವಾರ, ಸೆಪ್ಟೆಂಬರ್ 18, 2021
28 °C

ಭರಮಸಾಗರ: ಅತ್ಯಂತ ಹೀನಾಯ ಕೃತ್ಯ ಎಸಗಿದ ಆರೋಪಿಯ ಸ್ಥಳ ಮಹಜರು, ಬಿಗುವಿನ ವಾತಾವರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭರಮಸಾಗರ: ಅತ್ಯಂತ ಹೀನಾಯ ಕೃತ್ಯ ಎಸಗಿದ ಆರೋಪಿಯನ್ನು ಸ್ಥಳ ಮಹಜರು ಮಾಡಲು ಗ್ರಾಮಕ್ಕೆ ಕರೆತಂದಾಗ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಇಡೀ ಘಟನೆ ಜಾತಿ ಕಲಹದ ತಿರುವು ಪಡೆಯುವ ಸುಳಿವು ಪೊಲೀಸರಿಗೆ ಲಭ್ಯವಾಗಿತ್ತು. ಹೀಗಾಗಿ, ಜುಲೈ 23ರಿಂದಲೇ ಗ್ರಾಮಕ್ಕೆ ಬಿಗಿ ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. ಗ್ರಾಮದ ಪ್ರತಿ ಬೀದಿಯ ಹೆಜ್ಜೆ ಹೆಜ್ಜೆಗೂ ಪೊಲೀಸರು ಕಾಣುತ್ತಿದ್ದರು.

ಆರೋಪಿಯನ್ನು ಗ್ರಾಮಕ್ಕೆ ಕರೆತರುವ ಮಾಹಿತಿ ಅರಿತು ಸುತ್ತಮುತ್ತಲಿನ ಗ್ರಾಮಗಳ ಜನರು ಮಂಗಳವಾರ ಧಾವಿಸಿದ್ದರು. ನಿರೀಕ್ಷೆ ಮೀರಿ ಜನರು ಸೇರಿದ್ದರಿಂದ ಪೊಲೀಸರು ಆರೋಪಿ ಕರೆತರಲು ಹಿಂದೇಟು ಹಾಕಿದರು. ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಮನೆಯ ಬಳಿಗೆ ಕರೆತಂದು ಮಹಜರು ಮಾಡಿದರು. ಆರೋಪಿಯ ಮನೆಯಲ್ಲಿ ಅವಿತು ಇಟ್ಟಿದ್ದ ಕೊಳೆಯಾದ ಬಟ್ಟೆಯನ್ನು ವಶಕ್ಕೆ ಪಡೆದರು.

ಈ ವೇಳೆ ಸಂತ್ರಸ್ತ ಬಾಲಕಿಯ ಕುಟುಂಬ ಹಾಗೂ ಸಂಬಂಧಿಕರು ಆರೋಪಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜನರ ಕೈಗೆ ಆರೋಪಿ ಒಪ್ಪಿಸುವಂತೆ ಪೊಲೀಸರನ್ನು ಒತ್ತಾಯಿಸಿದರು. ಮತ್ತೊಂದೆಡೆ ಆರೋಪಿಯ ಕುಟುಂಬ ಹಾಗೂ ಸಂಬಂಧಿಕರೂ ಇದ್ದರು. ಈ ವೇಳೆ ನೂಕುನುಗ್ಗಲು ಉಂಟಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಬೀಸುವ ಅನಿವಾರ್ಯತೆ ಎದುರಾಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.