ನಾಯಕನಹಟ್ಟಿ: ಗುರುತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಭಾನುವಾರ ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮೀಜಿ ಭೇಟಿ ನೀಡಿ ದೇವರ ದರ್ಶನ ಪಡೆದರು.

‘ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಾಲಯದ ಬಗ್ಗೆ ಸಾಕಷ್ಟು ಕೇಳಿದ್ದೆ. ಇಲ್ಲಿನ ಜಾತ್ರೆಯು ಮಧ್ಯ ಕರ್ನಾಟಕದಲ್ಲಿ ಸಾಕಷ್ಟು ಖ್ಯಾತಿ ಪಡೆದಿದೆ. ಹೀಗಾಗಿ ದೇವರ ದರ್ಶನ ಮಾಡುವ ಉದ್ದೇಶಕ್ಕಾಗಿ ಇಲ್ಲಿಗೆ ಬಂದಿದ್ದೇನೆ’ ಎಂದು ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ದೇಗುಲದ ಪಕ್ಕದಲ್ಲಿನ ನೂತನ ದಾಸೋಹ ಮಂಟಪ, ರುದ್ರಾಭಿಷೇಕ ಭವನ ಮತ್ತು ಬೆಳ್ಳಿ ರಥದ ಬಗ್ಗೆ ಮಾಹಿತಿ ಪಡೆದರು. ಹೊರಮಠ ದೇಗುಲಕ್ಕೆ ಭೇಟಿ ನೀಡಿ ತಿಪ್ಪೇರುದ್ರಸ್ವಾಮಿ ಜೀವೈಕ್ಯ ಸಮಾಧಿಯಾಗಿದ್ದ ಸ್ಥಳ ಮತ್ತು ಗದ್ದುಗೆಯನ್ನು ಹಾಗೂ ಆವರಣದಲ್ಲಿರುವ ಕಲ್ಯಾಣಿಯನ್ನು ವೀಕ್ಷಿಸಿದರು.

ದೇವಾಲಯದಿಂದ ಗುರುತಿಪ್ಪೇರುದ್ರಸ್ವಾಮಿಗಳ ಭಾವಚಿತ್ರವನ್ನು ಸ್ಮರಣಿಕೆಯಾಗಿ ನೀಡಿ ಗೌರವಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-44-1066022154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.