ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಯರ್ ಸಿಡಿದು ವಾಹನ ಪಲ್ಟಿ: ವ್ಯಕ್ತಿ ಸಾವು

Published 28 ಮಾರ್ಚ್ 2024, 15:40 IST
Last Updated 28 ಮಾರ್ಚ್ 2024, 15:40 IST
ಅಕ್ಷರ ಗಾತ್ರ

ನಾಯಕನಹಟ್ಟಿ: ಟಯರ್ ಸ್ಫೋಟಗೊಂಡು ತೂಫಾನ್ ವಾಹನ ಪಲ್ಟಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ತಳಕು ಸಮೀಪದ ಹೊಸಹಳ್ಳಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಬಳ್ಳಾರಿ ಮೂಲದ ವಿ. ರಮೇಶ್ (50) ಮೃತ ವ್ಯಕ್ತಿ. ಚಾಲಕ ಸೇರಿ ವಾಹನದಲ್ಲಿದ್ದ 12 ಜನ ಗಾಯಗೊಂಡಿದ್ದಾರೆ. ಸಾರ್ವಜನಿಕರು ಹೆದ್ದಾರಿ ಆಂಬುಲೆನ್ಸ್ ಮೂಲಕ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ರಮೇಶ್ ಅವರು ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಎಲ್ಲ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. 

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ. ಕುಮಾರಸ್ವಾಮಿ, ಡಿವೈಎಸ್ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿ ಪರಿಶೀಲಿಸಿದರು. 

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ಜಡೆಪ್ಪ ಅವರ ಮಗ ಚೇತನ್‌ಗೆ ಚಳ್ಳಕೆರೆ ನಗರದಲ್ಲಿ ಹೆಣ್ಣುನೋಡುವ ಉದ್ದೇಶದಿಂದ ಕುಟುಂಬದ 13 ಸದಸ್ಯರು ತೂಫಾನ್ ವಾಹನದಲ್ಲಿ ಬರುವಾಗ ಅವಘಡ ನಡೆದಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT