ಚಳ್ಳಕೆರೆ: ಸ್ವಚ್ಛತೆ ಮತ್ತು ಗ್ರಾಮ ನೈರ್ಮಲ್ಯ ಕಾಪಾಡುವ ಉದ್ದೇಶದಿಂದ ಸರ್ಕಾರ ನೀಡುವ ಅನುದಾನದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಮನೆಗೂ ಶೌಚಾಲಯ ನಿರ್ಮಿಸಿಕೊಡುವ ಸಂಕಲ್ಪ ಮಾಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಕೆ.ವಿಜಯಕುಮಾರ್ ಹೇಳಿದರು.

ತಾಲ್ಲೂಕಿನ ಮೀರಾಸಾಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಿಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜ್ವರ, ಕೆಮ್ಮು, ನೆಗಡಿ, ಶೀತ, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಗ್ರಾಮದ ರಸ್ತೆ ಬದಿ ಮತ್ತು ಬೀದಿಯಲ್ಲಿನ ಕಸಗುಡಿಸಿ ಅದರ ವಿಲೇವಾರಿ ಮತ್ತು ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ.

ಹೀಗಾಗಿ ಗ್ರಾಮದ ರಸ್ತೆ ಬದಿ ಕಸರಾಶಿ ಹಾಕುವ ಮೂಲಕ ತಿಪ್ಪೆ ನಿರ್ಮಾಣ ಮಾಡಬಾರದು. ಮತ್ತು ಕುಡಿಯುವ ನೀರು ಪೋಲಾಗದಂತೆ ಎಚ್ಚರಿಕೆವಹಿಸಬೇಕು ಎಂದು ಗ್ರಾಮದ ಜನರಿಗೆ ಎಚ್ಚರಿಕೆ ನೀಡಿದರು.

ಮುಖ್ಯಶಿಕ್ಷಕ ರಾಜಪ್ಪ ಮಾತನಾಡಿ, ಮನೆ ಹಿತ್ತಲ ಸುತ್ತ ಮುತ್ತ ಸ್ವಚ್ಚತೆಗೊಳಿಸುವುದಲ್ಲದೆ ಗಿಡ-ಮರಗಳನ್ನು ಬೆಳೆಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದರು.

ಆರೋಗ್ಯ ಇಲಾಖೆ ಸಿಎಚ್ಓ ಸ್ನೇಹ ಮಾತನಾಡಿ, ಸ್ವಚ್ಚತೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ನಾವಿರುವ ವಾತಾವರಣ ಸದಾ ಸ್ವಚ್ಚತೆಯಿಂದ ಕೂಡಿರಬೇಕು ಎಂದು ಹೇಳಿದರು. ಸಾಹಿತಿ ಕೊರಲಕುಂಟೆ ತಿಪ್ಪೇಸ್ವಾಮಿ ಮಾತನಾಡಿದರು. ಗ್ರಂಥಪಾಲಕ ಗಾದ್ರಿ ಪಾಲಯ್ಯ, ಗ್ರಾಮ ಪಂಚಾಯಿತಿ ಸದಸ್ಯ ರಾಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.