ಮೊಳಕಾಲ್ಮುರು: ವಿಧಾನಸಭಾ ಕ್ಷೇತ್ರವು ಆರ್ಥಿಕವಾಗಿ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿರುವ ಕಾರಣ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದರು.

ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದಲ್ಲಿ ಸಂತೆ ಮೈದಾನದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ. ಅಂಬೇಡ್ಕರ್ ಭವನಕ್ಕೆ ಸ್ಥಳ ಹಾಗೂ ಅನುದಾನ ಮಂಜೂರಾಗಿದೆ. ಸಮುದಾಯ ಕಾರ್ಯಕ್ರಮಗಳಿಗೆ
ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಸ್ವಾತಂತ್ರ್ಯ ಹೋರಾಟದ ಹಿಂದೆ ಸಾವಿರಾರು ಜನರ ಶ್ರಮವಿದೆ. ಪ್ರತಿದಿನ ಅವರ ಸೇವೆ, ಬಲಿದಾನವನ್ನು ನೆನೆಯುವ ಅಗತ್ಯವಿದೆ. ಯುವಸಮೂಹ ದೇಶಭಕ್ತಿಯನ್ನು ಮೈಗೂಡಿಸಕೊಳ್ಳುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಧ್ವಜಾರೋಹಣ ಮಾಡಿದ ತಹಶೀಲ್ದಾರ್ ಟಿ. ಜಗದೀಶ್ ತಿಳಿಸಿದರು.

ಪಟ್ಟಣ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಆಕರ್ಷಕ ಪಥ ಸಂಚಲನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉತ್ತಮ ಪ್ರದರ್ಶನ ನೀಡಿದ ಶಾಲೆಗಳಿಗೆ ಬಹುಮಾನ ವಿತರಿಸಲಾಯಿತು.

ತಾಲ್ಲೂಕು ಪಂಚಾಯಿತಿ ಇಒ ಹನುಮಂತಪ್ಪ, ಸಿಪಿಐ ವಸಂತ್ ಆಸೋದೆ, ರಾಜ್ಯಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್. ಈರಣ್ಣ, ಪಟ್ಟಣ ಪಂಚಾಯಿತಿ ಸದಸ್ಯರಾದ ಎಸ್. ಖಾದರ್, ಅಬ್ದುಲ್ಲಾ, ಜಿ. ಪ್ರಕಾಶ್, ಮುಖಂಡರಾದ ಮರ್ಲಹಳ್ಳಿ ರವಿಕುಮಾರ್, ಕೊಂಡಾಪುರ ಪರಮೇಶ್ವರಪ್ಪ, ಟಿ.ಕೆ. ಕಲೀಂವುಲ್ಲಾ, ಅಬ್ದುಲ್ ಸುಬಾನ್ ಸಾಬ್, ವಿ. ಮಾರನಾಯಕ, ಬಿಇಒ ನಿರ್ಮಲಾದೇವಿ, ಡಾ. ರಂಗಪ್ಪ, ಸಿಡಿಪಿಒ ನವೀನ್ ಕುಮಾರ್, ಶಿಕ್ಷಕರಾದ ಜಾಕೀರ್ ಹುಸೇನ್, ತುಮಕೂರ್ಲಹಳ್ಳಿ ಓಬಣ್ಣ, ಪ್ರಾಂಶುಪಾಲ ಡಿ. ಗೋವಿಂದಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.