ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಕಾರದೊಂದಿಗೆ ನಿರುದ್ಯೋಗಿ ಪದವೀಧರರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಹೆಚ್ಚು ಹೆಚ್ಚು ತರಬೇತಿ ಆಯೋಜಿಸಲಾಗುವುದು ಎಂದು ವಿಧಾನಪರಿಷತ್ ಸದಸ್ಯ ಎಂ.ಚಿದಾನಂದಗೌಡ ಭರವಸೆ ನೀಡಿದರು.

ಮುರುಘಾಮಠಕ್ಕೆ ಭಾನುವಾರ ಭೇಟಿ ನೀಡಿ, ಶಿವಮೂರ್ತಿ ಮುರುಘಾ ಶರಣರಿಂದ ಆಶೀರ್ವಾದ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಪದವೀಧರರು, ಶಿಕ್ಷಕರು, ಉಪನ್ಯಾಸಕರ ಜೊತೆ ಬೆರೆತು ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದರು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಎಸ್. ನವೀನ್, ಮುಖಂಡರಾದ ಹನುಮಂತೇಗೌಡ, ದಗ್ಗೆ ಶಿವಪ್ರಕಾಶ್, ನಾಗರಾಜ್ ಬೇದ್ರೆ, ಸಂಪತ್‌ಕುಮಾರ್, ಬರಗೂರು ಶಿವಕುಮಾರ್, ಕಲ್ಲೇಶಯ್ಯ, ಚಂದ್ರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.