ಸೋಮವಾರ, ಏಪ್ರಿಲ್ 6, 2020
19 °C

ನಗರದಲ್ಲಿ ಆತಂಕ ಸೃಷ್ಟಿಸಿದ ವಿದೇಶಿಗನ ಓಡಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಇಲ್ಲಿನ ವಾಸವಿ ಮಹಲ್ ರಸ್ತೆಯಲ್ಲಿ ವಿದೇಶಿ ಪ್ರಜೆಯೊಬ್ಬರು ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿದ ಪ್ರಸಂಗ ಸೋಮವಾರ ಸಂಜೆ ನಡೆದಿದೆ. ಪೊಲೀಸರು ವಿದೇಶಿಗನನ್ನು ವಶಕ್ಕೆ ಪಡೆದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

‘ವಿದೇಶಿಗನನ್ನು ರಾಬರ್ಟ್ ಎಂದು ಗುರುತಿಸಲಾಗಿದೆ. ಸ್ವೀಡನ್ ದೇಶದಿಂದ ನವೆಂಬರ್ ತಿಂಗಳಲ್ಲಿ ಭಾರತಕ್ಕೆ ಬಂದಿದ್ದಾರೆ. ಪಾಸ್‌ಪೋರ್ಟ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸಾರ್ವಜನಿಕರು ಗಾಬರಿ ಆಗುವ ಅಗತ್ಯ ಇಲ್ಲ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ತಿಳಿಸಿದ್ದಾರೆ.

ಸೋಮವಾರ ಸಂಜೆ ವಾಸವಿ ಮಹಲ್ ರಸ್ತೆಯ ಮೊಬೈಲ್ ಅಂಗಡಿಗೆ ರಾಬರ್ಟ್ ಭೇಟಿ ನೀಡಿದ್ದರು. ವಿದೇಶಿ ಪ್ರಜೆ ಎಂಬುದು ತಿಳಿಯುತ್ತಿದ್ದಂತೆ ಎಲ್ಲರೂ ದೂರ ಸರಿದಿದ್ದಾರೆ. ಮೊಬೈಲ್‌ನಲ್ಲಿ ವಿಡಿಯೊ ಸೆರೆಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಸ್ಥಳಕ್ಕೆ ತೆರಳಿದ ಪೊಲೀಸರು ರಾಬರ್ಟ್ ಅವರನ್ನು ಪರಿಶೀಲಿಸಿದರು. ಬಳಿಕ ಸಾರ್ವಜನಿಕರ ಮನವೊಲಿಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದರಿಂದ ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)