ಚಳ್ಳಕೆರೆ: ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ನಡೆದಿದ್ದ ₹4.24 ಕೋಟಿ ‘ಅಂತಿಮ ಗಳಿಕೆ ರಜೆ ನಗದೀಕರಣ’ ಅವ್ಯವಹಾರದ ಆರೋಪದ ಮೇಲೆ ಸದ್ಯ ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಎಚ್.ಶಶಿಧರ್ ಅವರನ್ನು ರಾಜ್ಯ ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

ಶಶಿಧರ್ ಅವರು ಈ ಹಿಂದೆ ಮಧುಗಿರಿ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ನಿವೃತ್ತಿ ಹೊಂದಿದ, ಸ್ವಯಂ ನಿವೃತ್ತಿ ಪಡೆದ ಹಾಗೂ ಮರಣ ಹೊಂದಿದ ಸರ್ಕಾರಿ ನೌಕರರ ಹೆಸರಿನಲ್ಲಿ ಅಂತಿಮ ಗಳಿಕೆ ರಜೆ ನಗದೀಕರಣ ಮಂಜೂರಾತಿ ಮಾಡುವಲ್ಲಿ ಅಕ್ರಮ ನಡೆಸಿದ್ದಾರೆ ಎಂಬ ಆರೋಪವಿತ್ತು. ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ₹4,24,06,997 ದುರುಪಯೋಗವಾಗಿದೆ. ಆ ಮೂಲಕ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟುಮಾಡಲಾಗಿದೆ.

ವಿಶೇಷ ಲೆಕ್ಕ ಪರಿಶೋಧನಾ ತಂಡ ಹಾಗೂ ರಾಜ್ಯ ಮಟ್ಟದ ತನಿಖಾ ತಂಡವು ತನಿಖೆ ನಡೆಸಿದಾಗ ಈ ಅಕ್ರಮ ಬಯಲಾಗಿತ್ತು. ಖಜಾನೆ-2ರ ತಂತ್ರಾಂಶದಲ್ಲಿ ನೌಕರರ ‘ರೆಸಿಪಿಯಂಟ್ ಐಡಿ’ಯಲ್ಲಿದ್ದ ನೌಕರರ ಹೆಸರಿಗೂ ಮತ್ತು ವಾಸ್ತವವಾಗಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆದಾರರ ಹೆಸರಿಗೂ ಭಾರಿ ವ್ಯತ್ಯಾಸವಿರುವುದು ಪತ್ತೆಯಾಗಿದೆ. ಈ ಐಡಿಗಳನ್ನು ದುರ್ಬಳಕೆ ಮಾಡಿಕೊಂಡು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಲವು ಬಾರಿ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಹಣವನ್ನು ವರ್ಗಾಯಿಸಿರುವುದು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಆರ್ಥಿಕ ಅವ್ಯವಹಾರ ಮತ್ತು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಎಚ್.ಶಶಿಧರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-44-2010969022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.