ಬುಧವಾರ, ಜೂಲೈ 8, 2020
28 °C

ಚಿತ್ರದುರ್ಗ | 20 ಮಂದಿ ವಲಸೆ ಕಾರ್ಮಿಕರಲ್ಲಿ ಕೋವಿಡ್‌ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಉತ್ತರಪ್ರದೇಶದ 20 ವಲಸೆ ಕಾರ್ಮಿಕರಿಗೆ ಕೋವಿಡ್‌–19 ಇರುವುದು ಮಂಗಳವಾರ ದೃಢಪಟ್ಟಿದೆ. ಇವರು ಪಿ-1630 ರೋಗಿಯ ಪ್ರಾಥಮಿಕ ಸಂಪರ್ಕಿತರು.

ಉತ್ತರಪ್ರದೇಶದ ಗೋರಕ್‌ಪುರ ಜಿಲ್ಲೆಯ 58 ಕಾರ್ಮಿಕರು ತಮಿಳುನಾಡಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಮೇ 14ರಂದು ಚೆನ್ನೈನಿಂದ ಸರಕು ಸಾಗಣೆ ವಾಹನದಲ್ಲಿ ಉತ್ತರಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದರು. ಹೊಸೂರು, ಚಿಕ್ಕಬಳ್ಳಾಪುರ, ಪಾವಗಡ ಮೂಲಕ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಗಡಿ ತಲುಪಿದ್ದರು. ಅನುಮತಿ ಪಡೆಯದೇ ಪ್ರಯಾಣ ಬೆಳೆಸುತ್ತಿದ್ದ ಇವರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದು ಕ್ವಾರಂಟೈನ್‌ಗೆ ಒಳಪಡಿಸಿದ್ದರು.

ಹೀಗೆ ಕ್ವಾರಂಟೈನ್‌ನಲ್ಲಿದ್ದ 25 ವರ್ಷದ ವಾಹನ ಚಾಲಕನಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಇವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಇವರಿಗೆ ಸೋಂಕು ತಗುಲಿದ್ದು ಮೇ 22ರಂದು ಖಚಿತವಾಗಿತ್ತು. ಈ ರೋಗಿಯ ಪ್ರಾಥಮಿಕ ಸಂಪರ್ಕಿದಲ್ಲಿದ್ದ 58 ಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 20 ಜನರಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ.

‘ಕ್ವಾರಂಟೈನ್‌ನಲ್ಲಿದ್ದ ವಲಸೆ ಕಾರ್ಮಿಕರಿಗೆ ಕೋವಿಡ್‌–19 ಅಂಟಿರುವುದು ಖಚಿತವಾಗಿದೆ. ಇವರು ಚಿತ್ರದುರ್ಗ ಜಿಲ್ಲೆಯವರಲ್ಲ. ಅನುಮತಿ ಪಡೆಯದೇ ಪ್ರಯಾಣ ಮಾಡುತ್ತಿದ್ದವರನ್ನು ವಶಕ್ಕೆ ಪಡೆದು ಕ್ವಾರಂಟೈನ್‌ ಮಾಡಲಾಗಿತ್ತು. ಇದರಿಂದ ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಫಾಲಾಕ್ಷ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು