ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಇಬ್ಬರು ಸಾವು

Last Updated 23 ಸೆಪ್ಟೆಂಬರ್ 2021, 3:21 IST
ಅಕ್ಷರ ಗಾತ್ರ

ಚಿತ್ರದುರ್ಗ: ಇಲ್ಲಿನ ಹೊರವಲಯದ ತಮಟಕಲ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯ ಚಾಲಕ ಸದ್ದಾಂ ಹುಸೇನ್ (30) ಮತ್ತು ಕ್ಲೀನರ್ ಬೀರಪ್ಪ (23) ಮೃತಪಟ್ಟವರು.

ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಚಾಲಕ ಹಾಗೂ ನಿರ್ವಾಹಕ‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರನ್ನು ಲಾರಿಯಿಂದ ಹೊರ ತೆಗೆಯಲು ಪೊಲೀಸರು ಹರಸಾಹಸ ಮಾಡಬೇಕಾಯಿತು. ಲಾರಿ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT