ಸೋಮವಾರ, ಆಗಸ್ಟ್ 15, 2022
21 °C

ಚಿತ್ರದುರ್ಗ: ಇಟ್ಟಿಗೆ ಟ್ರ್ಯಾಕ್ಟರ್ ಬಿದ್ದು ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಯಕನಹಟ್ಟಿ (ಚಿತ್ರದುರ್ಗ): ಚಳ್ಳಕೆರೆ ತಾಲ್ಲೂಕಿನ ರೇಖಲಗೆರೆ ಗ್ರಾಮದ ಬಳಿ ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನಲ್ಲಿ ನಡೆದಿದೆ.

ಮೊಳಕಾಲ್ಮುರು ತಾಲ್ಲೂಕಿನ‌ ಯರೇನಹಳ್ಳಿ ಗ್ರಾಮದ ಬಸವರಾಜು (24) ಹಾಗೂ  ಶಶಿಕುಮಾರ್ (23) ಮೃತಪಟ್ಟವರು. ತಿಪ್ಪೇಸ್ವಾಮಿ ಎಂಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ.

ಚಿತ್ರದುರ್ಗಕ್ಕೆ ಇಟ್ಟಿಗೆ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ರೇಖಲಗೆರೆ ಗ್ರಾಮದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿದೆ. ಟ್ರ್ಯಾಕ್ಟರ್ ಮೇಲೆ ಮಲಗಿದ್ದ ನಾಲ್ಕು ಜನರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಘಟನೆಯಲ್ಲಿ ಮೃತಪಟ್ಟ ಬಸವರಾಜು ಆರು ತಿಂಗಳ ಹಿಂದೆ ರಾಯಪುರದಲ್ಲಿ ವಿವಾಹವಾಗಿದ್ದರು. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು