ಹಿರಿಯೂರು (ಚಿತ್ರದುರ್ಗ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ನಗರದ ಚಳ್ಳಕೆರೆ ರಸ್ತೆಯಲ್ಲಿ ಭಾನುವಾರ ನಸುಕಿನಲ್ಲಿ ನಡೆದಿದೆ.

ಶಹಾಪುರದಿಂದ ಬೆಂಗಳೂರು ಕಡೆ ಹೋಗುವಾಗ ನಸುಕಿನ 4.30 ಸಮಯಕ್ಕೆ ರಸ್ತೆಯ ಎಡಭಾಗಕ್ಕೆ ಪಲ್ಟಿ ಹೊಡೆದು ಈ ಘಟನೆ ಸಂಭವಿಸಿದೆ.

ಬಸ್ಸಿನಲ್ಲಿ ಮಹಿಳೆಯರು, ಪುರುಷರು, ಮಕ್ಕಳು ಸೇರಿ ಸುಮಾರು 50 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಇದರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ನಡೆಯುತ್ತಿದ್ದಂತೆ ಬಸ್ ಚಾಲಕ ಮತ್ತು ನಿರ್ವಾಹಕ ನಾಪತ್ತೆಯಾಗಿದ್ದಾರೆ. ವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.