ಮಂಗಳವಾರ, ಏಪ್ರಿಲ್ 13, 2021
29 °C

ಮೊಳಕಾಲ್ಮೂರು: ಸರಣಿ ಅಪಘಾತದಲ್ಲಿ ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮೂರು (ಚಿತ್ರದುರ್ಗ): ತಾಲ್ಲೂಕಿನ ರಾಯಪುರದಲ್ಲಿ ಹಾದು ಹೋಗಿರುವ 150ಎ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುತ್ತಿದ್ದ ರಾಯಲ್ ಎನ್ ಫೀಲ್ಡ್ ದ್ವಿಚಕ್ರ ವಾಹನ ರಾಯಪುರದಲ್ಲಿ ರಸ್ತೆ ದಾಟುತ್ತಿದ್ದ ದಾಸರ ಮುತ್ತಯ್ಯ (65) ಎಂಬವರಿಗೆ ಡಿಕ್ಕಿ ಹೊಡೆದಿದೆ. ಪಾದಚಾರಿ  ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಬೈಕ್ ಡಿವೈಡರ್ ಗೆ ಅಪ್ಪಳಿಸಿದೆ.  

ಈ ಸಂದರ್ಭದಲ್ಲಿ ಮತ್ತೊಂದು ವಾಹನವು ಬೈಕ್ ಸವಾರ ಅಮರ್ ಕುಮಾರ್ ಮೇಲೆ ಹರಿದಿದೆ. ಇದರಿಂದ ಬೈಕ್ ಸವಾರ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನದ ಸಹ ಸವಾರ ಉದಯಕಿರಣ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು