ಹಿರಿಯೂರು: ತಾಲ್ಲೂಕಿನ ಬಬ್ಬೂರು ಫಾರಂ ಸಮೀಪದ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಯುಜಿಸಿಇಟಿ ಕೃಷಿ ಕೋಟಾದಡಿಯಲ್ಲಿ ಮರು ಪ್ರಾಯೋಗಿಕ ಪರೀಕ್ಷೆಯನ್ನು ಮೇ 26 ರಂದು ನಡೆಸಲಾಗುತ್ತದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಕುಲಸಚಿವ ಶಾಮರಾವ ಜಾಗೀರದಾರ ಅವರು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಾಯೋಗಿಕ ಪರೀಕ್ಷೆಯನ್ನು 26ರಂದು ಬೆಳಿಗ್ಗೆ 9 ಗಂಟೆಯಿಂದ ಪ್ರಾರಂಭಿಸಲಾಗುವುದು. 23ರಿಂದ 26ರ ಬೆಳಿಗ್ಗೆ 7 ಗಂಟೆಯವರೆಗೆ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶವಿದೆ. ಅಭ್ಯರ್ಥಿಗಳು 26ರಂದು ಬೆಳಿಗ್ಗೆ 8 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ವರದಿ ಮಾಡಿಕೊಳ್ಳಬೇಕು. 27ರಂದು ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶವನ್ನು ಬೆಂಗಳೂರು ಕೃಷಿ ವಿವಿ ಮತ್ತು ಕೆಇಎಗೆ ಸಲ್ಲಿಸುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-44-1294125625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.