ಮಂಗಳವಾರ, ಜೂನ್ 28, 2022
21 °C

ಅನಧಿಕೃತ ಬಿತ್ತನೆ ಬೀಜ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಅನಧಿಕೃತ ಸೂರ್ಯಕಾಂತಿ ಬಿತ್ತನೆ ಬೀಜ ಸಾಗಣೆ ಮಾಡುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು ಬಿತ್ತನೆ ಬೀಜವನ್ನು ವಶಕ್ಕೆ ಪಡೆದಿದ್ದಾರೆ.

ರಾಣೆಬೆನ್ನೂರಿನಿಂದ ಆಂಧ್ರಪ್ರದೇಶದ ಹಿಂದೂಪುರಕ್ಕೆ ಹೊರಟಿದ್ದ ವಾಹನವನ್ನು ಭರಮಸಾಗರದ ಬಳಿ ತಡೆದು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 1,200 ಕೆ.ಜಿ. ತೂಕದ ಬಿತ್ತನೆ ಬೀಜವನ್ನು ಜಪ್ತಿ ಮಾಡಲಾಗಿದೆ.

‘ಸೂರ್ಯಕಾಂತಿ ಮತ್ತು ಮೆಕ್ಕೆಜೋಳದ ಬೀಜಗಳನ್ನು ರೈತರು ಪರಿಶೀಲಿಸಿ ಖರೀದಿಸಬೇಕು. ಅಧಿಕೃತ ಬೀಜ ಪರವಾನಗಿ ಹೊಂದಿದ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಬೇಕು. ಸಹಿ ಮಾಡಿದ ಬಿಲ್ ತಪ್ಪದೇ ಪಡೆಯಬೇಕು’ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಪಿ.ರಮೇಶ್‍ಕುಮಾರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು