ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ದಾಖಲೆ ಇಲ್ಲದ ₹ 20 ಲಕ್ಷ ವಶ

Published 26 ಮಾರ್ಚ್ 2024, 16:30 IST
Last Updated 26 ಮಾರ್ಚ್ 2024, 16:30 IST
ಅಕ್ಷರ ಗಾತ್ರ

ಚಿತ್ರದುರ್ಗ: ನಗರದ ಪಿಳ್ಳೇಕೆರೆನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕಾರು ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ ₹20.35 ಲಕ್ಷ ಪತ್ತೆಹಚ್ಚಿದ್ದು, ದಾಖಲೆ ಹಾಜರುಪಡಿಸಲು ವಿಫಲವಾಗಿದ್ದರಿಂದ ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಭರಮಸಾಗರದ ಮನೋಜ್‌ಕುಮಾರ್‌ ಎಂಬುವರು ಮಂಗಳವಾರ ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದರು. ನಗರದ ಹೊರವಲಯದ ಪಿಳ್ಳೇಕೆರೆನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ಕಾರು ತಪಾಸಣೆ ನಡೆಸಿದರು. ಈ ವೇಳೆ ನಗದು ಪತ್ತೆಯಾಗಿತ್ತು.

ಸಾಗಣೆ ಮಾಡುತ್ತಿದ್ದ ಹಣಕ್ಕೆ ಯಾವುದೇ ದಾಖಲೆ ಇರಲಿಲ್ಲ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಣದ ಮೂಲ ಹಾಗೂ ಇನ್ನಿತರ ಮಾಹಿತಿಗಾಗಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT