ಚಳ್ಳಕೆರೆ: ‘ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಿಂದ ಜಿಲ್ಲೆಯ ಜನರ ಬಹುದಿನದ ಕನಸು ನನಸಾಗಲಿದೆ’ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ಈಚೆಗೆ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಮಾಧ್ಯಮ ಮಹಾಒಕ್ಕೂಟ ಭದ್ರಾ ಮೇಲ್ದಂಡೆ ಯೋಜನೆ ವಿಳಂಬ ಕುರಿತ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

‘ಮಧ್ಯ ಕರ್ನಾಟಕದ ಅಭಿವೃದ್ಧಿ ಅತ್ಯವಶ್ಯವಾಗಿದ್ದು, ಈ ಯೋಜನೆಗೆ ಇದುವರೆಗೆ ₹ 13,280 ಕೋಟಿ ವೆಚ್ಚ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಚಳ್ಳಕೆರೆ ತಾಲ್ಲೂಕಿನ 51 ಕೆರೆಗಳಿಗೆ ನೀರು ತುಂಬಿಸಲಾಗುವುದು. ತುಮಕೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಸೇರಿ 6 ತಾಲ್ಲೂಕುಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ತುಂಬಾ ಅನುಕೂಲವಾಗಲಿದೆ’ ಎಂದು ಹೇಳಿದರು.

ಸಾಮಾಜಿಕ ಪ್ರಗತಿಪರ ಹೋರಾಟಗಾರ ಚಳ್ಳಕೆರೆ ಬಸವರಾಜ ಮಾತನಾಡಿ, ‘ಭದ್ರಾ ಮೇಲ್ದಂಡೆ ಯೋಜನೆ ಜಿಲ್ಲೆಯ ವಿವಿಧ ಸಂಘಟನೆಗಳ ನಾಲ್ಕು ದಶಕಗಳ ಹೋರಾಟದ ಫಲ. ಸರ್ಕಾರಗಳು ಹಂತ ಹಂತವಾಗಿ ಪ್ರತಿ ಬಜೆಟ್ನಲ್ಲೂ ಅನುದಾನ ಮೀಸಲಿರಿಸುತ್ತಾ ಬಂದಿವೆ’ ಎಂದು ಹೇಳಿದರು.

2022– 23ರ ಬಜೆಟ್ ಅಧಿವೇಶನದಲ್ಲಿ ಕೇಂದ್ರಸರ್ಕಾರ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ ₹ 5,300 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇದುವರೆಗೆ ಬಿಡಿಗಾಸೂ ಬಿಡುಗಡೆ ಮಾಡಿಲ್ಲ. ಜನಪ್ರತಿನಿಧಿಗಳ ಇಚ್ಛಾಶಕ್ತಿ ಈ ಯೋಜನೆ ವಿಳಂಬಕ್ಕೆ ಕಾರಣವಾಗಿದೆ. ಹೀಗಾಗಿ ಕೂಡಲೇ ಅನುದಾನ ಬಿಡುಗಡೆಗೊಳಿಸಿ ಯೋಜನೆ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಟಿ.ವೀರೇಶ್, ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಶಿವಕುಮಾರ್, ಉಪಾಧ್ಯಕ್ಷ ಡಿ.ಈಶ್ವರಪ್ಪ, ಜಿಲ್ಲಾ ಘಟಕದ ಅಧ್ಯಕ್ಷ ಕರುನಾಡು ಜಿಯಾವುಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗಂಗಾಧರ, ಎಚ್.ಲಕ್ಷ್ಮಣ, ಉಮೇಶ್ಚಂದ್ರ ಬ್ಯಾನರ್ಜಿ, ನಗರಸಭೆ ಸದಸ್ಯ ಎಂ.ಜಿ.ರಾಘವೇಂದ್ರ, ಬಷೀರ್ಹಯಾತ್, ಎಂ.ಎನ್.ಮೃತ್ಯುಂಜಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.