ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಿ

Last Updated 20 ಅಕ್ಟೋಬರ್ 2020, 11:25 IST
ಅಕ್ಷರ ಗಾತ್ರ

ಹೊಳಲ್ಕೆರೆ: ರೈತರು ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಬೇಕು ಎಂದು ಉದ್ಯಮಿ ಕರಿಸಿದ್ದಪ್ಪ ಸಲಹೆ ನೀಡಿದರು.

ತಾಲ್ಲೂಕಿನ ರಾಮಗಿರಿಯಲ್ಲಿ ಸೋಮವಾರ ಭಾರತ್ ಪೆಟ್ರೋಲಿಯಂ ಹಾಗೂ ಕರಿಸಿದ್ದೇಶ್ವರ ಪೆಟ್ರೋಲ್ ಬಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಕೃಷಿಮೇಳ ಉದ್ಘಾಟಿಸಿ ಮಾತನಾಡಿದರು.

ಈಗ ಕೃಷಿ ಕ್ಷೇತ್ರ ಹೆಚ್ಚು ಅಭಿವೃದ್ಧಿ ಹೊಂದಿದೆ. ರೈತರು ತಾಂತ್ರಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುತ್ತಿದ್ದಾರೆ. ಹೊಲ ಹಸನು ಮಾಡುವುದರಿಂದ ಹಿಡಿದು ಬಿತ್ತನೆ, ಕಳೆ ತೆಗೆಯುವುದು, ಔಷಧಿ ಸಿಂಪಡಿಸುವುದು, ಕಟಾವು, ಒಕ್ಕಣೆವರೆಗೆ ಯಂತ್ರಗಳನ್ನು ಬಳಸಲಾಗುತ್ತಿದೆ. ಇದರಿಂದ ಸುಲಭವಾಗಿ ಕೃಷಿ ಮಾಡುವುದರೊಂದಿಗೆ ಹೆಚ್ಚು ಇಳುವರಿ ಪಡೆಯಬಹುದು. ರೈತರು ಬೆಳೆಯ ಪ್ರತಿ ಹಂತದಲ್ಲಿ ಕೃಷಿ ತಜ್ಞರ ಸಲಹೆ ಪಡೆಯಬೇಕು ಎಂದರು.

ಕೃಷಿ ಮೇಳದಲ್ಲಿ ವಿವಿಧ ಮಾದರಿಯ ಕೃಷಿ ಪರಿಕರಗಳು, ಆಧುನಿಕ ಕೃಷಿ ಯಂತ್ರಗಳು, ವಾಹನಗಳನ್ನು ಪ್ರದರ್ಶಿಸಲಾಯಿತು.

ಭಾರತ್ ಪೆಟ್ರೋಲಿಯಂ ಮಾರಾಟ ಅಧಿಕಾರಿ ಚಂದ್ರಕಾಂತ ನಾಯಕ್, ಮುಫೀಜ್, ಎಸ್ ಜೆಎಂ ಶಾಲೆಯ ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT