ಚಿತ್ರದುರ್ಗ: ‘ಚುನಾವಣೆಯಲ್ಲಿ ಮತ ಬ್ಯಾಂಕ್ಗೆ ಮಾತ್ರ ವಾಲ್ಮೀಕಿ ಸಮುದಾಯವನ್ನು ಪಕ್ಷಗಳು ಬಳಸಿಕೊಳ್ಳುತ್ತಿವೆ. ಆದರೆ, ಗೆದ್ದ ಮೇಲೆ ನಮ್ಮ ಸಮಸ್ಯೆಗಳಿಗೆ ಪರಿಹಾರ ನೀಡುವತ್ತ ಗಮನ ನೀಡುತ್ತಿಲ್ಲ’ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ದೂರಿದರು.

ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ನಾಯಕ ಸಮಾಜದಿಂದ ಭಾನುವಾರ ಆಯೋಜಿಸಿದ್ದ ವಾಲ್ಮೀಕಿ ಜಾತ್ರಾ ಮಹೋತ್ಸವ, ಮದಕರಿ ನಾಯಕ ಜಯಂತ್ಯುತ್ಸವದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸರ್ಕಾರಗಳು ಸಮುದಾಯವನ್ನು ಮತ ಬ್ಯಾಂಕ್ ಆಗಿ ರೂಪಿಸಿಕೊಂಡಿವೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ನಮ್ಮನ್ನು ನಿರ್ಲಕ್ಷ್ಯ ಮಾಡುತ್ತಿವೆ’ ಎಂದು ಬೇಸರಿಸಿದರು.

‘ವಾಲ್ಮೀಕಿ ನೀಡಿದ ರಾಮಾಯಣ ಜಗತ್ತಿನ ಎಲ್ಲ ಸಮುದಾಯಕ್ಕೂ ಅಗತ್ಯವಾಗಿದೆ. ವಾಲ್ಮೀಕಿ ಜಯಂತಿಯನ್ನು ಎಲ್ಲಾ ಸಮುದಾಯಗಳು ಸೇರಿ ಆಚರಿಸಬೇಕು. ಆಗ ಮಾತ್ರ ವಾಲ್ಮೀಕಿಯವರಿಗೆ ನಿಜವಾದ ನಮನ ಸಲ್ಲಿಸಿದಂತೆ ಆಗುತ್ತದೆ’ ಎಂದರು.

ನಾಯಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ಮುಖಂಡರಾದ ಸಂಪತ್ ಕುಮಾರ್, ಪಾಪನಾಯಕ, ರವಿಕುಮಾರ್, ಮಲ್ಲಿಕಾರ್ಜನ್, ಹೊರಕೇರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.