ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ಸಾರ್ವಜನಿಕರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಥೀಮ್‌ಪಾರ್ಕ್‌ಗೆ ಭೂಮಿ ಕೊಡಿ
ನವೀನ್ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ ‘ಚಿತ್ರದುರ್ಗದಲ್ಲಿ ಮದಕರಿ ನಾಯಕರ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವರು ಘೋಷಣೆ ಮಾಡಿದ್ದರು. ಜಿಲ್ಲಾಡಳಿತ 30 ಎಕರೆ ಜಾಗ ನೀಡಿದರೆ ಥೀಮ್ ಪಾರ್ಕ್ ಜೊತೆಗೆ ಬೃಹತ್ ವಾಲ್ಮೀಕಿ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಮದಕರಿ ನಾಯಕರು ಹಾಗೂ ವಾಲ್ಮೀಕಿಯ ಶ್ರೇಯವನ್ನು ಜಗತ್ತಿಗೆ ತಿಳಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕಿದೆ’ ಎಂದರು. ‘ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ವಾಲ್ಮೀಕಿ ನಾಯಕ ಜನಸಂಖ್ಯೆ ಇರುವುದರಿಂದ ರಾಜ್ಯಮಟ್ಟದ ವಾಲ್ಮೀಕಿ ಜಯಂತಿಯನ್ನು ಇಲ್ಲಿಯೇ ಆಚರಿಸುವಂತಾಗಬೇಕು. ರಾಮಾಯಣ ಮಹಾಕಾವ್ಯವು ಮನುಷ್ಯ ಸಂಬಂಧದ ಬಗ್ಗೆ ಅಡಿಪಾಯ ಹಾಕಿಕೊಟ್ಟಿದೆ. ಮಾದರಿ ಸಮಾಜ ನಿರ್ಮಾಣ ಹೇಗೆ ಆಗಬೇಕು ಎಂಬ ಕಲ್ಪನೆಯನ್ನು ಇಡೀ ಜಗತ್ತಿಗೆ ತಿಳಿಸಿಕೊಟ್ಟಿದೆ. ವಾಲ್ಮೀಕಿಯವರ ವಿಚಾರ ಸಂದೇಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ’ ಎಂದರು.