ಹಿರಿಯೂರು: ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯ ನಾಲ್ಕನೇ ಬಾರಿ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಜಿಲ್ಲೆಯ ಶಾಸಕರು, ಅಧಿಕಾರಿಗಳು, ರೈತ ಮುಖಂಡರೊಂದಿಗೆ ಭಾನುವಾರ ಬಾಗಿನ ಅರ್ಪಿಸಿದರು.

ಅಣೆಕಟ್ಟೆಯ ಮೇಲಿಂದ ಸಚಿವ ಸುಧಾಕರ್ ಹಾಗೂ ಶಾಸಕರಾದ ಬಿ.ಜಿ. ಗೋವಿಂದಪ್ಪ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೇರಿ ಹಲವು ಗಣ್ಯರು ಪುಷ್ಪಾರ್ಚನೆ ಮಾಡಿ, ಹಾಲುತುಪ್ಪ ಸುರಿದು, ಬಾಗಿನ ಅರ್ಪಿಸಿ ಗಂಗೆಗೆ ನಮಿಸಿದರು.

ನಂತರ ಮಾತನಾಡಿದ ಸಚಿವ ಡಿ.ಸುಧಾಕರ್, 2025ರ ಜನವರಿಯಲ್ಲಿ ಜಲಾಶಯ ಮೂರನೇ ಬಾರಿಗೆ ಕೋಡಿ ಬಿದ್ದಾಗ ಸಿಎಂ, ಡಿಸಿಎಂ ಜತೆ ಬಾಗಿನ ಅರ್ಪಿಸಲಾಗಿತ್ತು. ವರುಣನ ಕೃಪೆ, ಭದ್ರಾ ಅಣೆಕಟ್ಟೆಯ ನೀರನ್ನು ಪಂಪ್ ಮಾಡಿದ್ದರ ಪರಿಣಾಮ ಕೇವಲ ಹತ್ತು ತಿಂಗಳಲ್ಲಿ ಜಲಾಶಯ ನಾಲ್ಕನೇ ಬಾರಿಗೆ ಅ.19ರಂದು) ಕೋಡಿ ಹರಿಯಿತು. ಸಮಯ ಹೊಂದಿಕೆಯಾಗದ ಕಾರಣಕ್ಕೆ ಸಿಎಂ, ಡಿಸಿಎಂ ಕಾರ್ಯಕ್ರಮಕ್ಕೆ ಬರಲಿಲ್ಲ. ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಜಿಲ್ಲೆಯ ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಬಾಗಿನ ಅರ್ಪಿಸಲಾಗಿದೆ ಎಂದರು.

‘ತಿಂಗಳ ಅಂತ್ಯಕ್ಕೆ ಗೂನೂರು ಸಮೀಪಕ್ಕೆ ಭದ್ರಾ ನೀರು ತರಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ. ವಾಣಿವಿಲಾಸ ಜಲಾಶಯದ ಹಿನ್ನೀರಿನಿಂದ ತೊಂದರೆಗೆ ಒಳಗಾಗಿರುವ ಹೊಸದುರ್ಗ ತಾಲ್ಲೂಕಿನ ರೈತರ ಸಮಸ್ಯೆ ಬಗೆಹರಿಸುವ ಸಂಬಂಧ ಕಳೆದ ತಿಂಗಳು ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೂಪುರೇಷೆ ಸಿದ್ದಪಡಿಸಲಾಗಿದೆ. ರೈತರು ಅನುಭವಿಸುತ್ತಿರುವ ತೊಂದರೆಗಳನ್ನು ನಿವಾರಿಸುತ್ತೇವೆ’ ಎಂದು ಸುಧಾಕರ್ ಭರವಸೆ ನೀಡಿದರು.

ಹೊಸದುರ್ಗ ತಾಲ್ಲೂಕಿನ 920 ರೈತರಿಗೆ ಪರಿಹಾರ ವಿತರಣೆ ಮಾಡಲು ಈಗಾಗಲೇ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಕೆರೆ, ರಸ್ತೆ, ಸೇತುವೆ ದುರಸ್ತಿಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಸ್ಪಷ್ಟಪಡಿಸಿದರು.

ಗಲಭೆ ವಿರೋಧಿಸಿ ಬಿಜೆಪಿಯವರು ಪಾದಯಾತ್ರೆ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ. ಬಳ್ಳಾರಿ ಬಿಜೆಪಿಗರ ಆಸ್ತಿಯಲ್ಲ. ರಾಜ್ಯದ ಅಭಿವೃದ್ಧಿಯನ್ನು ನೋಡಿ ಸಹಿಸದ ಬಿಜೆಪಿಗರು ಇಲಿಯನ್ನು ಹುಲಿ ಮಾಡಲು ಹೊರಟಿದ್ದಾರೆ
ಡಿ. ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ

ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿಶ್ವೇಶ್ವರಯ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಫ್.ಎಚ್. ಲಮಾಣಿ, ಅಧೀಕ್ಷಕ ಎಂಜಿನಿಯರ್ ಕೆ.ಟಿ. ಹರೀಶ್, ಕಾರ್ಯಪಾಲಕ ಎಂಜಿನಿಯರ್ ಚಂದ್ರಪ್ಪ ಬಾರಿಕರ, ಮುಖಂಡರಾದ ಅಮೃತೇಶ್ವರಸ್ವಾಮಿ, ಗರೀಬ್ ಆಲಿ, ಖಾದಿ ರಮೇಶ್, ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಟಿ. ಚಂದ್ರಶೇಖರ್, ಸಿ.ಎನ್.ಸುಂದರ್, ಆರ್.ಬಾಲಕೃಷ್ಣ, ಸಣ್ಣಪ್ಪ, ಗಿಡ್ಡೋಬನಹಳ್ಳಿ ಅಶೋಕ್, ಕಲ್ಲಟ್ಟಿ ಹರೀಶ್, ಮುಕುಂದ, ಗೌನಹಳ್ಳಿ ಚಂದ್ರಪ್ಪ, ಗೀತಾ ನಾಗಕುಮಾರ್, ಹಾಲಸ್ವಾಮಿ, ಮೈಲಾರಪ್ಪ, ಕೆ.ಸಿ. ಹೊರಕೇರಪ್ಪ, ಅಂಬಿಕಾ ಆರಾಧ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.