ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ಜಿಲ್ಲೆಗೆ ₹ 20 ಕೋಟಿ ಅನುದಾನ: ಎಸ್.ಲಿಂಗಮೂರ್ತಿ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಎಸ್‌.ಲಿಂಗಮೂರ್ತಿ
Last Updated 29 ಆಗಸ್ಟ್ 2021, 13:38 IST
ಅಕ್ಷರ ಗಾತ್ರ

ಚಿತ್ರದುರ್ಗ: ವೀರಶೈವ– ಲಿಂಗಾಯತ ಸಮುದಾಯದ ಬಡವರ ಏಳಿಗೆಗಾಗಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಹಲವು ಯೋಜನೆಗಳನ್ನು ರೂಪಿಸಿದೆ. ಪ್ರತಿ ಜಿಲ್ಲೆಗೆ ₹ 20 ಕೋಟಿ ಅನುದಾನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಆಲೋಚಿಸುತ್ತಿದೆ ಎಂದು ನಿಗಮದ ನಿರ್ದೇಶಕರೂ ಆಗಿರುವ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ ತಿಳಿಸಿದರು.

ವೀರಶೈವ ಸಮಾಜ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಶ್ರೀಗುರು ಜಿಲ್ಲಾ ಯೋಗ, ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಇಲ್ಲಿನ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಭಾನುವಾರ ನಡೆದ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

‘ವೀರಶೈವ ಲಿಂಗಾಯತ ಬೀದಿಗಳಲ್ಲಿ ಅಭಿವೃದ್ಧಿ ಕಾಮಗಾರಿ, ಕಲ್ಯಾಣ ಮಹೋತ್ಸವ, ದೇವರ ಲಾಂಛನ, ಜ್ಞಾನದ ಬಲ, ಬಸವ ಬೆಳಗು, ಅರಿವಿನ ದಾಸೋಹ ನಿಲಯ... ಹೀಗೆ 23 ವಿವಿಧ ಯೋಜನೆಗಳನ್ನು ನಿಗಮ ರೂಪಿಸಿದೆ. ಸಮುದಾಯದ ಬಡ ಮತ್ತು ಹಸಿದವರ ಏಳಿಗೆ ನಿಗಮದ ಉದ್ದೇಶವಾಗಿದೆ. ಸಮಾಜದ ಎಲ್ಲ ಶ್ರಮಿಕರ ಅಭಿವೃದ್ಧಿಗೆ ನಿಗಮ ಬದ್ಧವಾಗಿದೆ’ ಎಂದರು.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ‘ನಗರ ಹಾಗೂ ಗ್ರಾಮೀಣ ಪ್ರದೇಶದ ಹಲವೆಡೆ ರುದ್ರಭೂಮಿಯ ಅಭಿವೃದ್ಧಿಗೆ ಅನುದಾನದ ಅಗತ್ಯವಿದೆ. ಕಲ್ಯಾಣ ಮಂದಿರ ನಿರ್ಮಾಣಕ್ಕೆ ₹ 5 ಕೋಟಿ ನೀಡಬೇಕಿದೆ’ ಎಂದರು.

ಚಿತ್ರದುರ್ಗ ವೀರಶೈವ ಸಮಾಜದ ಅಧ್ಯಕ್ಷ ಎಲ್.ಬಿ.ರಾಜಶೇಖರ್, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ, ದಾವಣಗೆರೆ ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಎಸ್.ಮಂಜುಳಾ, ವೀರಶೈವ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ರುದ್ರೇಶ್ ಐಗಳ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT