ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಠಗಳಿಗೆ ಭೇಟಿ: ಸ್ವಾಮೀಜಿ ಆರ್ಶೀವಾದ ಪಡೆದ ವಿಜಯೇಂದ್ರ

Published 16 ನವೆಂಬರ್ 2023, 15:47 IST
Last Updated 16 ನವೆಂಬರ್ 2023, 15:47 IST
ಅಕ್ಷರ ಗಾತ್ರ

ಹೊಸದುರ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗುರುವಾರ ತಾಲ್ಲೂಕಿನ ವಿವಿಧ ಮಠಗಳಿಗೆ ಭೇಟಿ ನೀಡಿ, ಸ್ವಾಮೀಜಿಗಳ ಆರ್ಶೀವಾದ ಪಡೆದರು.

ವಿಜಯೇಂದ್ರ ಅವರು ತಾಲ್ಲೂಕಿನ ಮಧುರೆಗೆ ಬರುತ್ತಿದ್ದಂತೆ, ಕಾರ್ಯಕರ್ತರು ಜೈಕಾರ, ಹೂವಿನ ಹಾರ ಹಾಕುವುದರ ಮೂಲಕ ಸಂಭ್ರಮಿಸಿದರು. ನಂತರ ಭಗೀರಥ ಗುರುಪೀಠದ ಪುರುಷೋತ್ತಮಾನಂದ ಪುರಿ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಆರ್ಶೀವಾದ ಪಡೆದರು.

ಪಟ್ಟಣದ ಟಿ.ಬಿ. ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ನಂತರ ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಹಾಗೂ ಕನಕಧಾಮದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆರ್ಶೀವಾದ ಪಡೆದರು.

ನಂತರ ಮಾತನಾಡಿದ ಅವರು, ‘ಎಲ್ಲಾ ಸಮುದಾಯದವರನ್ನು ಸಮನಾಗಿ ಕಾಣುವವರೇ ನಿಜವಾದ ಜನನಾಯಕ. ಯಡಿಯೂರಪ್ಪ ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ರೈತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ಬಡವರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನಾನೂ ಎಲ್ಲಾ ಮಠಾಧೀಶರು ಹಾಗೂ ಸಮುದಾಯದವರನ್ನು ಸಮನಾಗಿ ಕಾಣುತ್ತೇನೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವೆ’ ಎಂದು ಹೇಳಿದರು.

‘ರಾಜ್ಯದ 28 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಗೆಲ್ಲುವ ಮೂಲಕ ಹೊಸ ಇತಿಹಾಸ ಸೃಷ್ಠಿಸಬೇಕು ಎನ್ನುವುದು ನಮ್ಮ ಗುರಿ. ಒಂದು ದಿನವೂ ಮನೆಯಲ್ಲಿರದೆ, ರಾಜ್ಯ ಪ್ರವಾಸ ಮಾಡುತ್ತೇನೆ. ಲೋಕಸಭೆ ಜೊತೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಮಹತ್ವ ಕೊಟ್ಟು ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ’ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ. ಮುರುಳಿ ಮತ್ತು ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT