ಚಿತ್ರದುರ್ಗ: ‘ವಿಕಸಿತ ಭಾರತದ ಪರಿಕಲ್ಪನೆ ಆರ್ಥಿಕ ಬೆಳವಣಿಗೆ ಮಾತ್ರವಲ್ಲದೆ ಸಮಾನತೆ, ಸ್ವಚ್ಛತೆ, ಶಾಂತಿ, ವೈಜ್ಞಾನಿಕ ಮನೋಭಾವಗಳ ಜಾಗೃತಿಯನ್ನೂ ಒಳಗೊಂಡಿದೆ. ನಾಯಕತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸತ್ಯ ನಿಷ್ಠೆಯನ್ನು ಅಳವಡಿಸಿಕೊಳ್ಳಬೇಕು’ ಎಂದು ವಕೀಲರ ಸಂಘದ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಸಿ.ಶಿವು ಯಾದವ್ ತಿಳಿಸಿದರು.

ನಗರದ ಡಾನ್ ಬೋಸ್ಕೋ ಪದವಿ ಕಾಲೇಜು ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ವಿಕಸಿತ ಭಾರತ ಯುವ ಸಂಸತ್ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

‘ಯುವಕರು ದೇಶದ ಶಕ್ತಿ, ಸಂಪತ್ತು ಮತ್ತು ಭವಿಷ್ಯ. ಆದ್ದರಿಂದ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಯುವಜನತೆಯಲ್ಲಿ ಸ್ಪಷ್ಟ ಅರಿವು ಇರಬೇಕು. ಇಲ್ಲವಾದರೆ ಭವಿಷ್ಯ ಕರಾಳವಾಗಲಿದೆ’ ಎಂದು ಎಚ್ಚರಿಸಿದರು.

‘ಪ್ರಜಾಪ್ರಭುತ್ವ ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ಪರಸ್ಪರ ಚರ್ಚೆ, ಭಿನ್ನಾಭಿಪ್ರಾಯ ಮತ್ತು ನಿರ್ಣಯಗಳು ಪ್ರಮುಖ ಅಂಶಗಳಾಗಿದ್ದು, ಸೌಹಾರ್ದಯುತವಾಗಿ ಚರ್ಚಿಸುವ, ಒಳಿತನ್ನು ಆಯ್ಕೆಮಾಡಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ಸಂವಿಧಾನವನ್ನು ಗೌರವಿಸುವುದು, ದೇಶದ ಏಕತೆ ಅಖಂಡತೆ ಮತ್ತು ಶಾಂತಿಗಾಗಿ ಕೈಜೋಡಿಸುವುದು ಅಗತ್ಯವಾಗಿದೆ’ ಎಂದು ಡಾನ್ ಬೋಸ್ಕೋ ಪದವಿ ಕಾಲೇಜು ಪ್ರಾಂಶುಪಾಲ ಫಾ.ಬೆನ್ನಿ ಕ್ರಿಸ್ತುದಾಸ್ ತಿಳಿಸಿದರು.

‘ಇದು ಕೇವಲ ಸ್ಪರ್ಧೆಯಲ್ಲ. ನಿಮ್ಮೊಳಗಿನ ನಾಯಕತ್ವವನ್ನು ಹೊರತರುವ ಒಂದು ವೇದಿಕೆ. ದೇಶದ ಸಮಸ್ಯೆಗಳ ಬಗ್ಗೆ ಚಿಂತನೆ ಮಾಡಿ, ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ. ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆ ಅರಿಯಲು ಮತ್ತು ಸಂಸತ್ತಿನ ಕಾರ್ಯವಿಧಾನ ತಿಳಿಯಲು ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶವಾಗಿದೆ. ವಿದ್ಯಾರ್ಥಿಗಳು ಉಪಯೋಗ ಪಡೆದುಕೊಳ್ಳಬೇಕು’ ಎಂದು ಆಡಳಿತಾಧಿಕಾರಿ ಫಾ.ಫೆಲಿಕ್ಸ್ ಸೆರಾವೋ ಹೇಳಿದರು.

‘ಯುವಜನತೆಯ ಆಲೋಚನೆಗಳು ಆಧುನಿಕವಾಗುವುದರ ಜೊತೆಗೆ ಮಾನವೀಯ ಮೌಲ್ಯಗಳು, ಭಾರತೀಯ ಸಂಸ್ಕೃತಿಯಲ್ಲಿ ಬೇರೂರಿದಾಗ ಮಾತ್ರ ನಿಜವಾದ ‘ವಿಕಸಿತ ಭಾರತ’ ನಿರ್ಮಾಣವಾಗುತ್ತದೆ’ ಎಂದು ಎನ್ಎಸ್ಎಸ್ ಜಿಲ್ಲಾ ನೋಡಲ್ ಅಧಿಕಾರಿ ಎನ್.ಧನಕೋಟಿ ತಿಳಿಸಿದರು.

ಜಿಲ್ಲೆಯ ವಿವಿಧ ಪದವಿ ಕಾಲೇಜುಗಳಿಂದ 30 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಡಾನ್ ಬೋಸ್ಕೋ ಪದವಿ ಕಾಲೇಜಿನ ವೈಷ್ಣವಿ, ನಿಧಿಶ್ರೀ, ಎಸ್ಜೆಎಂ ಕಾನೂನು ಕಾಲೇಜಿನ ಆದಿ, ಝೇವಿಬಾ, ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುದಾಸಿರಾ ರಾಜ್ಯಮಟ್ಟಕ್ಕೆ ಆಯ್ಕೆಯಾದರು.

ಉಪ ಪ್ರಾಂಶುಪಾಲ ಫಾ.ಕ್ರಿಸ್ಟಿ ಜೋಸೆಫ್, ಉಪನ್ಯಾಸಕರಾದ ಲೋಕೇಶ್ ನಾಯಕ್, ವಿ.ಪ್ರಸಾದ್, ನಾಗರಾಜ್ ಇದ್ದರು.

Quote - ವಿಶ್ವದಲ್ಲೇ ಅತಿ ದೊಡ್ಡ ಯುವಶಕ್ತಿಯನ್ನು ಹೊಂದಿರುವ ಭಾರತ ಜಾಗತಿಕ ಮಟ್ಟದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ದೇಶದ ಯುವಶಕ್ತಿ ಸಕಾರಾತ್ಮಕವಾಗಿ ಬಳಕೆಯಾಗಬೇಕು. ಯುವಜನತೆ ಸಾಮಾಜಿಕ ಹಾಗೂ ರಾಜಕೀಯ ಅರಿವು ಬೆಳೆಸಿಕೊಳ್ಳಬೇಕು. ಫಾ.ಬೆನ್ನಿ ಕ್ರಿಸ್ತುದಾಸ್ ಪ್ರಾಂಶುಪಾಲ ಡಾನ್ ಬೋಸ್ಕೋ ಪದವಿ ಕಾಲೇಜು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.