ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಮೂಲಭೂತ ವ್ಯವಸ್ಥೆಗೆ ಆಗ್ರಹ– ಮತಗಟ್ಟೆ ಸಮೀಪ ಗ್ರಾಮಸ್ಥರ ಪ್ರತಿಭಟನೆ

Published 25 ಏಪ್ರಿಲ್ 2024, 15:36 IST
Last Updated 25 ಏಪ್ರಿಲ್ 2024, 15:36 IST
ಅಕ್ಷರ ಗಾತ್ರ

ಚಿತ್ರದುರ್ಗ: ವಿದ್ಯುತ್‌ ಸಂ‍ಪರ್ಕ, ಮೊಬೈಲ್‌ ಫೋನ್‌ ಟವರ್‌ ಹಾಗೂ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ತಾಲ್ಲೂಕಿನ ಯರೇಹಳ್ಳಿ ಗ್ರಾಮಸ್ಥರು ಮತಗಟ್ಟೆ ಸಮೀಪ ಜಮಾಯಿಸಿ ಗುರುವಾರ ಪ್ರತಿಭಟನೆ ನಡೆಸಿದರು.

ಮತಯಂತ್ರಗಳು ಮತಗಟ್ಟೆ ತಲುಪಿದ ಬಳಿಕ ಜಮಾಯಿಸಿದ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವುದಾಗಿ ಘೋಷಣೆ ಕೂಗಿದರು. ಮತಯಂತ್ರ ಹೊತ್ತು ತಂದಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್‌ಆರ್‌ಟಿಸಿ) ಬಸ್‌ ಎದುರು ಧರಣಿ ಕುಳಿತರು.

ಇಂಗಳದಾಳ್‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರೇಹಳ್ಳಿ, ಜಿಲ್ಲಾ ಕೇಂದ್ರದಿಂದ 35 ಕಿ.ಮೀ ದೂರದಲ್ಲಿದೆ. ಗ್ರಾಮದಲ್ಲಿ 150ಕ್ಕೂ ಹೆಚ್ಚು ಮನೆಗಳಿವೆ. ಈವರೆಗೆ ಗ್ರಾಮಕ್ಕೆ ವಿದ್ಯುತ್‌ ಸಂಪರ್ಕವಿಲ್ಲ. ಕೃಷಿ ಪಂಪ್‌ಸೆಟ್‌ಗೆ ಪೂರೈಕೆ ಮಾಡುವ ವಿದ್ಯುತ್‌ ಅನ್ನು ಗ್ರಾಮಸ್ಥರು ಬಳಸಿಕೊಳ್ಳುತ್ತಿದ್ದಾರೆ. ಹಲವು ಬಾರಿಗೆ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸದೇ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮಕ್ಕೆ ಮೋಬೈಲ್‌ ಫೋಸ್‌ ಸಂಪರ್ಕವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಗೆ ಹಲವುಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬಸ್‌ ಸಂಚಾರ ಸರಿಯಾಗಿಲ್ಲದಿರುವ ಕಾರಣಕ್ಕೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಿವೈಎಸ್‌ಪಿ ದಿನಕರ್, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್‌, ತಹಶೀಲ್ದಾರ್‌ ನಾಗವೇಣಿ ಸೇರಿ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪ್ರತಿಭಟನಕಾರರ ಮನವೊಲಿಸಿತು. ಬಳಿಕ ಜನರು ಮತದಾನ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT