ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೃದಯಾಘಾತ: ಮತಗಟ್ಟೆ ಅಧಿಕಾರಿ ಸಾವು

Published 26 ಏಪ್ರಿಲ್ 2024, 8:13 IST
Last Updated 26 ಏಪ್ರಿಲ್ 2024, 8:13 IST
ಅಕ್ಷರ ಗಾತ್ರ

ಚಳ್ಳಕೆರೆ (ಚಿತ್ರದುರ್ಗ): ಚುನಾವಣಾ ಕರ್ತವ್ಯದಲ್ಲಿದ್ದ ಸಹಾಯಕ ಮತಗಟ್ಟೆ ಅಧಿಕಾರಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಳ್ಳಕೆರೆ ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗ್ರಾಮದ ಮೇಗಳ ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ನಡೆದಿದೆ.

ಯಶೋದಮ್ಮ (58) ಮೃತಪಟ್ಟವರು. ಚಳ್ಳಕೆರೆ ತಾಲ್ಲೂಕಿನ ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಯಶೋಧಮ್ಮ ಅವರಿಗೆ ಶುಕ್ರವಾರ ಬೆಳಿಗ್ಗೆ ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು‌ ಚಳ್ಳಕೆರೆ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿದೆ. ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟರು ಎಂದು ಸಹಾಯಕ ಚುನಾವಣಾಧಿಕಾರಿ ಆನಂದ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT