ಹೊಸದುರ್ಗ: ತಾಲ್ಲೂಕಿನ ವಿವಿ ಸಾಗರದ ಹಿನ್ನೀರಿನ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್, ಶಾಸಕ ಬಿ.ಜಿ. ಗೋವಿಂದಪ್ಪ ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಕಾರೇಹಳ್ಳಿ, ಲಿಂಗದಹಳ್ಳಿ, ಅತ್ತಿಮಗ್ಗೆ, ಮಲ್ಲಾಪುರ ಸೇರಿ ಹಲವು ಕಡೆಗಳಲ್ಲಿ ಭೇಟಿ ನೀಡಿದರು.

‘ವಿ.ವಿ ಸಾಗರದ ಹಿನ್ನೀರು ಈ ಭಾಗದ ರೈತರಿಗೆ ಸಂಕಟ ತಂದಿದೆ. ಖಾತೆ ಜಮೀನುಗಳಿಗೂ ನೀರು ಬಂದಿವೆ. ರಸ್ತೆ, ಸಂಪರ್ಕ ಸೇತುವೆಗಳೆಲ್ಲ ಮುಳುಗಿವೆ. ಸಂಚಾರ ಸ್ಥಗಿತಗೊಂಡಿದೆ. ಶಾಲೆ– ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಒಂದು ವಾರದಿಂದ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಸಂತ್ರಸ್ತರೊಬ್ಬರು ಅಳಲು ತೋಡಿಕೊಂಡರು.

‘130 ಅಡಿಗೆ ನೀರು ಇದ್ದಾಗ ಸಮಸ್ಯೆ ಇಲ್ಲ. 130 ಅಡಿ ಮೇಲೆ ಬಂದ ನೀರು ಗ್ರಾಮ ಹಾಗೂ ಜಮೀನುಗಳಿಗೆ ಬರುತ್ತಿದೆ. ಕೋಡಿಯನ್ನು 130ಕ್ಕೆ ಇರಿಸಿದರೆ ಅನುಕೂಲವಾಗುತ್ತದೆ’ ಎಂದು ಸ್ಥಳೀಯರು ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಡಿ. ಸುಧಾಕರ್, ‘ಈ ಬಗ್ಗೆ ಸಭೆ ಕರೆದು ಚರ್ಚಿಸಲಾಗುವುದು. ಸಮಗ್ರ ಸಮೀಕ್ಷೆ ಸಹ ನಡೆಸಲಾಗುವುದು. ಈಗಾಗಲೇ ತೂಬ್ ಹಾಗೂ ಮುಖ್ಯ ಗೇಟ್ ಮೂಲಕ ನೀರನ್ನು ಹೊರಹಾಕಲಾಗುತ್ತಿದೆ. ಸದ್ಯ 9,000 ಕ್ಯೂಸೆಕ್ ನೀರು ಹೊರ ಹಾಕಲಾಗಿದೆ. ಹಿನ್ನೀರು ಪ್ರದೇಶಗಳಿಗೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಹಿನ್ನೀರಿನಿಂದ ಮುಳುಗಡೆಯಾಗಿರುವ ರಸ್ತೆ, ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ ₹124 ಕೋಟಿ ಅಂದಾಜು ಪಟ್ಟಿಯನ್ನು ಶಾಸಕ ಬಿ.ಜಿ. ಗೋವಿಂದಪ್ಪ ಸಲ್ಲಿಸಿದ್ದಾರೆ. ಪರಿಹಾರಕ್ಕಾಗಿ 225 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು’ ಎಂದು ಹೇಳಿದರು.

ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ‘ಹಿನ್ನೀರಿನ ಜನರ ಸಂಕಷ್ಟ ಕುರಿತು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಇಲ್ಲಿನ ರೈತರ ಸಂಕಷ್ಟಕ್ಕೆ ನೆರವಾಗಬೇಕು. ಹಿನ್ನೀರು ಪ್ರದೇಶದಲ್ಲಿ ಮುಳುಗಡೆ ಆಗಿರುವಂತಹ ರೈತರ ಜಮೀನುಗಳಿಗೆ ಪರಿಹಾರ ಒದಗಿಸಬೇಕು. ಕೊರತೆ ಆಗಿರುವಂತಹ ಮೂಲ ಸೌಕರ್ಯಗಳನ್ನು ಸರಿಪಡಿಸಬೇಕು. ಇಂತಹ ಎಲ್ಲ ಸಮಸ್ಯೆಗಳನ್ನೂ ಪೂರ್ಣವಾಗಿ ಸಚಿವರ ಗಮನಕ್ಕೆ ತಂದಿದ್ದೇನೆ. ನವೆಂಬರ್ 6ರಂದು ನಡೆಯಲಿರುವ ಮುಖ್ಯಮಂತ್ರಿ ಜೊತೆಗಿನ ಸಭೆಯಲ್ಲಿ ಹಿನ್ನೀರಿನ ಜನರ ಸಮಸ್ಯೆ ಕುರಿತು ಮನವರಿಕೆ ಮಾಡುತ್ತೇನೆ. ಪರಿಹಾರ ಕೊಡಿಸುತ್ತೇನೆ’ ಎಂದು ಸಚಿವರು ಭರವಸೆಯ ಮಾತುಗಳನ್ನು ಆಡಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಸದಸ್ಯ ಅಲ್ತಾಫ್ ಪಾಷಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲೋಕೇಶಪ್ಪ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.