ದೇವಸ್ಥಾನದ ಹತ್ತಿರ ದೊರೆಯುವ ನೀರನ್ನು ಹೊತ್ತು ಸಾಗಿರುವ ಮಹಿಳೆಯರು.
ಸಮಸ್ಯೆ ಪರಿಹಾರಕ್ಕೆ ಪ್ರಯತ್ನ
‘ಮೂರು ವರ್ಷದಿಂದ ದಿಂಡಾವರ ಗೌಡನಹಳ್ಳಿ ಭಾಗದಲ್ಲಿ ಸರಿಯಾಗಿ ಮಳೆ ಸುರಿದಿಲ್ಲ. ಬಹುತೇಕ ಕೆರೆಕಟ್ಟೆಗಳು ಖಾಲಿಯಾಗಿವೆ. 1000 ದಿಂದ 1200 ಅಡಿಯವರೆಗೆ ಕೊಳವೆಬಾವಿ ಕೊರೆಸಿದರೂ ನೀರು ಸಿಗುತ್ತಿಲ್ಲ. ತಾಲ್ಲೂಕಿನ ಬೇರೆ ಭಾಗಗಳಿಗೆ ಹೋಲಿಸಿದಲ್ಲಿ ಈ ಭಾಗದಲ್ಲಿ ಅಂತರ್ಜಲ ಸಂಪೂರ್ಣ ಕುಸಿದಿದೆ. ಕೆರೆಕೋಡಿಹಟ್ಟಿಯ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಗೌಡನಹಳ್ಳಿ ಕೆರೆ ಅಂಗಳದಲ್ಲಿರುವ ಕೊಳವೆ ಬಾವಿಯಿಂದ ನೀರು ಪೂರೈಕೆ ಮಾಡುವ ಬಗ್ಗೆ ಪರಿಶೀಲಿಸುತ್ತೇವೆ’ ಎಂದು ಪಿಡಿಒ ಬಾಲಸುಬ್ರಮಣ್ಯ ತಿಳಿಸಿದರು.