ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳಲ್ಕೆರೆ: ಪತಿಯ ಶವ ನೋಡಿ ಪತ್ನಿ ಸಾವು

Last Updated 1 ಮೇ 2022, 19:07 IST
ಅಕ್ಷರ ಗಾತ್ರ

ಹೊಳಲ್ಕೆರೆ: ತಾಲ್ಲೂಕಿನ ಕುಡಿನೀರಕಟ್ಟೆ ಗ್ರಾಮದಲ್ಲಿ ಭಾನುವಾರ ಅಪಘಾತದಲ್ಲಿ ಮೃತಪಟ್ಟ ಪತಿಯ ಶವ ನೋಡಿದ ಪತ್ನಿ
ಯೂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಿವೃತ್ತ ಶಿಕ್ಷಕ ಮಹೇಶ್ವರಪ್ಪ (70) ಅವರು ಬೈಕಿನಲ್ಲಿ ಹೋಗುತ್ತಿದ್ದಾಗ ಕುಡಿನೀರಕಟ್ಟೆ ಗೇಟ್ ಬಳಿ ಕಾರು ಡಿಕ್ಕಿಯಾಗಿ ಮೃತಪಟ್ಟಿದ್ದರು.

ಅವರ ಶವವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಆಸ್ಪತ್ರೆಗೆ ಬಂದ ಮಹೇಶ್ವರಪ್ಪ ಅವರ ಪತ್ನಿ ಅನ್ನಪೂರ್ಣಮ್ಮ (65) ಪತಿಯ ಶವ ನೋಡಿದ ತಕ್ಷಣ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT