ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟೆನಗರಿ ಬೀದಿಯಲ್ಲಿ ಕರಡಿ ಸಂಚಾರ

ಜೋಗಿಮಟ್ಟಿ ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆ
Last Updated 19 ಮೇ 2020, 15:17 IST
ಅಕ್ಷರ ಗಾತ್ರ

ಚಿತ್ರದುರ್ಗ: ಲಾಕ್‌ಡೌನ್‌ ಕಾರಣಕ್ಕೆ ಜನ ಹಾಗೂ ವಾಹನ ಸಂಚಾರ ವಿರಳವಾಗಿರುವುದರಿಂದ ವನ್ಯಜೀವಿಗಳು ಜನವಸತಿ ಪ್ರದೇಶದ ಸುತ್ತ ಕಾಣಿಸಿಕೊಳ್ಳುತ್ತಿವೆ. ನಗರದ ಕಾಮನಬಾವಿ ಹಾಗೂ ಐಯುಡಿಪಿ ಬಡಾವಣೆಯಲ್ಲಿ ಕರಡಿ ಕಾಣಿಸಿಕೊಂಡು ಆತಂಕ ಮೂಡಿಸಿದೆ.

ಕಾಮನಬಾವಿ ಬಡಾವಣೆಯಲ್ಲಿ ಮೇ 11ರಂದು ರಾತ್ರಿ ಕರಡಿ ಸಂಚರಿಸಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ರಾತ್ರಿ 2.28ಕ್ಕೆ ಕರಡಿ ಬಡಾವಣೆಗೆ ಬಂದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಕಾರು, ಬೈಕ್‌ಗಳ ನಡುವೆ ಇದು ಸಾಗಿದೆ. ನಾಯಿ ಬೊಗಳಿದರೂ ಕರಡಿ ಗಾಂಭೀರ್ಯದಿಂದಲೇ ಹೆಜ್ಜೆ ಹಾಕಿದೆ. ಜೋಗಿಮಟ್ಟಿಗೆ ಸಾಗುವ ಮಾರ್ಗದಲ್ಲಿ ಚಿರತೆ ಕಾಣಿಸಿಕೊಂಡಿದೆ. ವಾಹನ ಸವಾರರೊಬ್ಬರು ಈ ದೃಶ್ಯವನ್ನು ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ.

‘ಲಾಕ್‌ಡೌನ್‌ ಘೋಷಣೆಯಾದ ಬಳಿಕ ಕರಡಿ ನಗರದೊಳಗೆ ಪ್ರವೇಶ ಮಾಡಿದೆ. ನಗರದ ಹೊರಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಐಯುಡಿಪಿ ಬಡಾವಣೆಯಲ್ಲಿ ಕರಡಿಯನ್ನು ನೋಡಿದ ಸಾರ್ವಜನಿಕರೊಬ್ಬರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು’ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT