ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ಬೈಕಿನಿಂದ ಬಿದ್ದು ಮಹಿಳೆ ಸಾವು

Last Updated 5 ಫೆಬ್ರುವರಿ 2023, 6:23 IST
ಅಕ್ಷರ ಗಾತ್ರ

ಹಿರಿಯೂರು: ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದ ಸಮೀಪ ಶನಿವಾರ ರಾಷ್ಟ್ರೀಯ ಹೆದ್ದಾರಿ ನಾಲ್ಕರಿಂದ ಸೇವಾರಸ್ತೆಗೆ ತಿರುವು ಪಡೆಯುವಾಗ ಬೈಕೊಂದು ಉರುಳಿ ಬಿದ್ದು, ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ರೂಪಾ (30) ಮೃತಪಟ್ಟವರು. ಬೈಕ್ ಓಡಿಸುತ್ತಿದ್ದ ಪತಿ ರವಿಕುಮಾರ್ ಗಾಯಗೊಂಡಿದ್ದು, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಅಂಜನಾಪುರ ಗ್ರಾಮಕ್ಕೆ ದಂಪತಿ ಬೈಕಿನಲ್ಲಿ ಹೋಗುವಾಗ ಅಪಘಾತವಾಗಿದೆ ಎಂದು ಪ್ರಕರಣ ದಾಖಲು ಮಾಡಿಕೊಂಡಿರುವ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT