ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯೂರು | ಬೈಕ್‌ಗೆ ಲಾರಿ ಡಿಕ್ಕಿ: ಮಹಿಳೆ ಸಾವು

Published 16 ಜೂನ್ 2024, 16:27 IST
Last Updated 16 ಜೂನ್ 2024, 16:27 IST
ಅಕ್ಷರ ಗಾತ್ರ

ಹಿರಿಯೂರು: ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೊಲ್ಲಹಳ್ಳಿ ಗ್ರಾಮದ ಬೀದರ್–ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ತಾಲ್ಲೂಕಿನ ಗುಳಗೊಂಡನಹಳ್ಳಿಯ ಸಂಗೀತ (32) ಮೃತರು. ಬೈಕ್ ಸವಾರ ಜೆ. ಮುದ್ದೇಗೌಡ ಹಾಗೂ ಅವರ ಪುತ್ರಿ ಎಂಟು ವರ್ಷದ ಯಶಸ್ವಿನಿ ಗಾಯಗೊಂಡಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಾಯಕನಹಟ್ಟಿಗೆ ಹೋಗಿ ಮರಳುವಾಗ ಅಪಘಾತ ಸಂಭವಿಸಿದೆ. ಐಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT