ಹಿರಿಯೂರು: ‘ಮಹಿಳೆಯರ ಅಭಿವೃದ್ಧಿಗೆ ಸದಾ ಬದ್ಧವಾಗಿರುವ ಕಾಂಗ್ರೆಸ್ ಪಕ್ಷದ ಮೇಲೆ ಮಹಿಳಾ ಮೀಸಲಾತಿ ವಿರೋಧದ ಆರೋಪ ಹೊರಿಸುತ್ತಿರುವ ಬಿಜೆಪಿ ಮುಖಂಡರು ಇನ್ನಾದರೂ ತಮ್ಮ ನಾಟಕವನ್ನು ನಿಲ್ಲಿಸಬೇಕು’ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಿವರಂಜನಿ ಹೇಳಿದ್ದಾರೆ.

‘ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ವಿಧೇಯಕಕ್ಕೆ ಸೋಲಾದ ನಂತರ ಪ್ರಧಾನಿಯವರು, ಮೀಸಲಾತಿಗೆ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಆರೋಪ ಮಾಡಿದ್ದು, ಪಕ್ಷದ ಹುಳುಕು ಮುಚ್ಚಿಕೊಳ್ಳಲು ಇಂತಹ ಹಸಿ ಸುಳ್ಳುಗಳನ್ನು ಹೇಳಬಾರದಿತ್ತು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘2023ರಲ್ಲಿ ಮಹಿಳಾ ಮೀಸಲಾತಿ ವಿಧೇಯಕವನ್ನು ಸರ್ವಾನುಮತದಿಂದ ಅನುಮೋದಿಸಿರುವುದನ್ನು ಪ್ರಧಾನಿಯವರು ಪ್ರಸ್ತಾಪಿಸದಿರುವುದರ ಹಿಂದಿನ ಹುನ್ನಾರ ಸಾಮಾನ್ಯರಿಗೂ ಅರ್ಥವಾಗುತ್ತದೆ. ಒಮ್ಮೆ ಅನುಮೋದನೆ ಪಡೆದಿರುವ ವಿಧೇಯಕವನ್ನು ಅನುಷ್ಠಾನಕ್ಕೆ ತರುವ ಬದಲು ಸೋಲಾಗುತ್ತದೆ ಎಂದು ತಿಳಿದೂ ಮತ್ತೊಮ್ಮೆ ಅಧಿವೇಶನದಲ್ಲಿ ಮಂಡಿಸುವ ನಾಟಕ ಪ್ರಜಾಪ್ರಭುತ್ವದ ಅಣಕವಾಗಿದೆ’ ಎಂದು ಟೀಕಿಸಿದ್ದಾರೆ.

‘2011ರ ಜನಗಣತಿ ಹಳೆಯದಾಗಿದ್ದು, ಹೊಸದಾಗಿ ಜಾತಿಗಣತಿ ನಡೆಸಿ ಮಹಿಳಾ ಮೀಸಲು ಜಾರಿಗೆ ತರುತ್ತೇವೆ ಎಂದು ಹೇಳಿದ್ದ ಬಿಜೆಪಿಗರು ಇದ್ದಕ್ಕಿದ್ದಂತೆ ವಿಧೇಯಕ ಮಂಡಿಸಲು ಮುಂದಾಗಿರುವುದಕ್ಕೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮೊದಲಾದ ಕಡೆ ಚುನಾವಣೆ ನಡೆಯುತ್ತಿರುವುದು ಕಾರಣ ಎಂಬ ಸತ್ಯ ಎಲ್ಲರ ಅರಿವಿಗೆ ಬಂದಿದೆ’ ಎಂದು ಟೀಕಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-2008068481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.