ಸೋಮವಾರ, ಸೆಪ್ಟೆಂಬರ್ 20, 2021
21 °C

ಸರ್ಕಾರದ ಕೊಂಡಿಯಾಗಿ ಕೆಲಸ ಮಾಡಿ: ಸುನಿತಾ ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭರಮಸಾಗರ: ಪದಾಧಿಕಾರಿಗಳು ಸರ್ಕಾರ ಮತ್ತು ಜನ ಇವರ ನಡುವಿನ ಕೊಂಡಿಯಾಗಿ ಕೆಲಸ ಮಾಡಿ ಪಕ್ಷಕ್ಕೆ ಹೆಚ್ಚು ಶಕ್ತಿ ತುಂಬಬೇಕು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುನಿತಾ ಜಗದೀಶ್ ಹೇಳಿದರು.

ಪಟ್ಟಣದ ದೊಡ್ಡಪೇಟೆ ಶಿವಯೋಗಿ ಮಂದಿರದ ಸಭಾಂಗಣದಲ್ಲಿ ಗುರುವಾರ ನಡೆದ ಮಂಡಲ ಮಹಿಳಾ ಮೋರ್ಚಾದ 3ನೇ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

ಪಕ್ಷದ ಪದಾಧಿಕಾರಿಗಳು ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿ ಸಂಘಟನೆ ಮಾಡಬೇಕು. ಸಾಮಾಜಿಕ ಕಾರ್ಯ ಚಟುವಟಿಕೆ ಹಮ್ಮಿಕೊಳ್ಳಬೇಕು. ಸರ್ಕಾರದ ಯೋಜನೆಗಳನ್ನು ಎಲ್ಲರಿಗೂ ಸಿಗುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೈಲಜಾ ರೆಡ್ಡಿ ಮಾತನಾಡಿ, ‘ಕಾರ್ಯಕರ್ತರು ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು. ಸಂಘಟನೆಯನ್ನು ಬಲಪಡಿಸಬೇಕು. ಹೋಬಳಿಯಲ್ಲಿ ನಡೆದ ಬಾಲಕಿ ಆತ್ಯಾಚಾರ ಹಾಗೂ ಕೊಲೆಯಂತಹ ಘಟನೆಗಳು ಜರುಗದಂತೆ ಶೌಚಾಲಯ, ಪಡಿತರ ಮುಂತಾದ ವ್ಯವಸ್ಥೆ ಜನರಿಗೆ ತಲುಪುವಂತೆ ಮಾಡಬೇಕು’ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಲಾಕ್ಷಮ್ಮ, ‘ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡುತ್ತೇವೆ’ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಟಿ.ಸುರೇಶ್, ಮಂಡಲ ಅಧ್ಯಕ್ಷ ಶೈಲೇಶ್ ಕುಮಾರ್ ಮಾತನಾಡಿದರು. ನಿರ್ಮಲಾ ಮಂಜುನಾಥ್ ನಿರೂಪಿಸಿದರು. ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಅಧ್ಯಕ್ಷತೆ ವಹಿಸಿದ್ದರು.

ಭುವನಾ, ಮಂಡಲ ಪ್ರಧಾನ ಕಾರ್ಯದರ್ಶಿ ವೀರೇಶ್, ಶಕ್ತಿ ಕೇಂದ್ರದ ಅಧ್ಯಕ್ಷ ಎ.ಇ.ಚಂದ್ರಶೇಖರ್, ರೇಖಾಪ್ರಭು, ನಂದಾ, ಕರಿಯಮ್ಮ ಹಾಗೂ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.