ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸಂಖ್ಯೆ ನಿಯಂತ್ರಿಸಿದರೆ ಬಡತನ ನಿವಾರಣೆ

ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಅನಂತ್
Last Updated 11 ಜುಲೈ 2019, 12:53 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಬಡನತ ನಿರ್ಮೂಲನೆ, ಮೂಲ ಸೌಕರ್ಯಗಳ ಅಭಿವೃದ್ಧಿ ಸೇರಿ ದೇಶದಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಜನಸಂಖ್ಯಾ ನಿಯಂತ್ರಣ ಅನಿವಾರ್ಯ’ ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಅನಂತ್ ತಿಳಿಸಿದರು.

ತರಾಸು ರಂಗಮಂದಿರದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಜನಸಂಖ್ಯೆ ಹೆಚ್ಚಾದಂತೆಲ್ಲಾ ಮೂಲಸೌಲಭ್ಯಗಳ ಕೊರತೆಯುಂಟಾಗಿ ಬಡತನ, ಅನಕ್ಷರಸ್ಥರ ಸಂಖ್ಯೆ ಅಧಿಕವಾಗುತ್ತದೆ. ಆದ್ದರಿಂದ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸುವ ಮೂಲಕ ಜನಸಂಖ್ಯೆ ನಿಯಂತ್ರಣಕ್ಕೆ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕಿದೆ’ ಎಂದು ಸಲಹೆ ನೀಡಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ರಂಗನಾಥ್, ‘ಒಂದು ಕುಟುಂಬಕ್ಕೆ ಒಂದೇ ಆರೋಗ್ಯವಂತ ಮಗು ಸಾಕು ಎಂಬ ಮನೋಭಾವ ಎಲ್ಲರಲ್ಲೂ ಬರಬೇಕು. ಅದಕ್ಕಾಗಿ ಗ್ರಾಮ, ನಗರ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಸಾರ್ವಜನಿಕರಿಗೆ ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವು ಮೂಡಿಸಬೇಕು’ ಎಂದು ಮನವಿ ಮಾಡಿದರು.

ಡಾ. ರವೀಂದ್ರ, ‘ಸ್ತ್ರೀಯರಿಗಿಂತಲೂ ಪುರುಷರ ಸಂತಾನಹರಣ ಶಸ್ತ್ರಚಿಕಿತ್ಸೆ ಅತೀ ಸರಳ ವಿಧಾನವಾಗಿದೆ. ಆದರೆ, ಈ ಕುರಿತು ಪುರುಷರಲ್ಲಿ ತಪ್ಪು ತಿಳಿವಳಿಕೆಗಳಿದ್ದು, ಅರಿವು ಮೂಡಿಸುವ ಅಗತ್ಯವಿದೆ’ ಎಂದರು.

ಜಿಲ್ಲಾ ಕೀಟಜನ್ಯ ರೋಗಗಳ ನಿಯಂತ್ರಣಾಧಿಕಾರಿ ಡಾ.ಜಯಮ್ಮ, ‘ಜನಸಂಖ್ಯೆ ನಿಯಂತ್ರಣಕ್ಕೆ ಎಲ್ಲರ ಸಹಭಾಗಿತ್ವ ಅವಶ್ಯಕವಾಗಿದೆ. ಆರೋಗ್ಯವಂತ ಜನರ ನೆಮ್ಮದಿಗೆ ಸೊಳ್ಳೆಗಳ ನಿಯಂತ್ರಣವು ತುಂಬಾ ಅಗತ್ಯವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕುಟುಂಬ ಕಲ್ಯಾಣ ವಿಧಾನಗಳ, ಜನಸಂಖ್ಯಾ ನಿಯಂತ್ರಣಕ್ಕೆ ಶ್ರಮಿಸಿದ ವೈದ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಸೇರಿ ಒಟ್ಟು 39 ಸಾಧಕರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪಾಲಾಕ್ಷ, ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಓ. ಸುಧಾ, ಚಿತ್ರದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ಎ.ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT