ಭಾನುವಾರ, ಸೆಪ್ಟೆಂಬರ್ 19, 2021
24 °C

ಕೆ.ಪೂರ್ಣಿಮಾಗೆ ಸಚಿವ ಸ್ಥಾನ ನೀಡಿ: ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿತ್ರದುರ್ಗ: ದುರ್ಬಲ ಸಮುದಾಯದ ಏಳಿಗೆಯ ಹಿತದೃಷ್ಟಿಯಿಂದ ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡಿ. ಇಲ್ಲವೇ ಶಾಸಕಿಯ ಪತಿ ಶ್ರೀನಿವಾಸ್‌ ಅವರನ್ನು ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿ ಎಂದು ಯಾದವ ಮಹಾಸಂಸ್ಥಾನದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಒತ್ತಾಯಿಸಿದರು.

‘ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕ ಬಿ.ಎಲ್‌.ಸಂತೋಷ್ ಅವರು ಮಾತು ಕೊಟ್ಟಿದ್ದರು. ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ವಾಗ್ದಾನ ಉಳಿಸಿಕೊಳ್ಳುವ ವಿಶ್ವಾಸವಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಬಹುತೇಕ ಎಲ್ಲ ಸಮುದಾಯದ ಶಾಸಕರಿಗೆ ಸಚಿವ ಸ್ಥಾನದ ಅವಕಾಶ ಸಿಕ್ಕಿದೆ. ಪ್ರತಿ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆ ತೋರಿಸಿದರೂ ಅಧಿಕಾರದಲ್ಲಿ ಅವಕಾಶ ಸಿಗುತ್ತಿಲ್ಲ. ಮೂಢನಂಬಿಕೆಗೆ ಕಟ್ಟುಬಿದ್ದು ಹಿಂದುಳಿದಿರುವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಾಗಿರುವ ಅಗತ್ಯವಿದೆ. ಇದರಿಂದ ಇತರ ದುರ್ಬಲ ವರ್ಗದ ಸಮುದಾಯವನ್ನು ಮೇಲೆತ್ತಲು ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಇತ್ತೀಚೆಗೆ ಮುಂದುವರಿದ ವರ್ಗದ ಜನರೇ ವಿಧಾನಪರಿಷತ್‌ ಸದಸ್ಯರಾಗುತ್ತಿದ್ದಾರೆ. ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ರಾಜ್ಯದ ಸುಮಾರು 30 ಲಕ್ಷ ಯಾದವ ಸಮುದಾಯ ಬಿಜೆಪಿ ಬೆಂಬಲಕ್ಕೆ ನಿಂತಿದೆ. ಶ್ರಮಕ್ಕೆ ತಕ್ಕ ಪ್ರತಿಫಲವನ್ನು ಬಿಜೆಪಿ ನೀಡದೇ ಇದ್ದರೆ ಬೇಸರವಾಗುತ್ತದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು