ಶುಕ್ರವಾರ, ಜೂನ್ 5, 2020
27 °C

ಬಾಲಕಿ ಸಾವು: ಡೆಂಗೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮದ ಎಸ್‌ಸಿ ಕಾಲೊನಿಯಲ್ಲಿ ಶುಕ್ರವಾರ ಅನನ್ಯ (8) ಎಂಬ ಬಾಲಕಿ ಜ್ವರದಿಂದ ಮೃತಪಟ್ಟಿದ್ದಾಳೆ.

ಹೆಚ್ಚಿನ ಚಿಕಿತ್ಸೆಗಾಗಿ ಬಾಲಕಿಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.

ಸಾವಿಗೆ ಡೆಂಗೆ ಕಾರಣ ಎಂದು ಮೃತ ಬಾಲಕಿಯ ತಂದೆ ಆಂಜನೇಯ ಆರೋಪಿಸಿದ್ದಾರೆ. ವಿಮ್ಸ್ ವೈದ್ಯರು ಡೆಂಗೆ ಲಕ್ಷಣಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ಸಿಬ್ಬಂದಿ ಕೂಡಲೇ ಕಾಲೊನಿಗೆ ಭೇಟಿ ನೀಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು