ಶಿವಮೊಗ್ಗ: ‘ನಾಡು ಕಂಡ ಶ್ರೇಷ್ಠ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಆಯೋಜಿಸಲಾಗಿದೆ’ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಸಂಜೆ ನಡೆದ ಅಭಿಮಾನೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರಲಿದ್ದಾರೆ. ಅವರೊಂದಿಗೆ ನಾಡಿನ ಎಲ್ಲ ಮಠಗಳ ಸ್ವಾಮೀಜಿಗಳು, ವಿವಿಧ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ’ ಎಂದರು.

‘ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ರಾಜಕೀಯ ಬದುಕಿನ ಗೌರವಾರ್ಥವಾಗಿ ನಡೆಯುವ ಈ ಕಾರ್ಯಕ್ರಮ ಸದಾ ನೆನಪಿನಲ್ಲಿರುವಂತೆ ಅಗಬೇಕು. ಅದಕ್ಕೆ ಜಿಲ್ಲೆಯ ಎಲ್ಲರ ಸಹಕಾರ ಅವಶ್ಯಕವಾಗಿ ಬೇಕು’ ಎಂದು ಹೇಳಿದರು.

‘ಯಡಿಯೂರಪ್ಪ ಅವರಿಗೂ ಬೇರೆ ಮುಖ್ಯಮಂತ್ರಿಗಳಿಗೂ ಬಹಳ ವ್ಯತ್ಯಾಸವಿದೆ. ಬಿಜೆಪಿ ಅಂಬೆಗಾಲು ಇಡುವಾಗ ರೈತರ ಮನೆ–ಮನೆಗೆ ಭೇಟಿ ಕೊಟ್ಟು ಸಂಘಟನೆ ಮಾಡಿದ್ದಾರೆ. ತಾವೇ ಕಟ್ಟಿದ ಮನೆಯಲ್ಲಿ ನಾಯಕರಾಗಿ ಸೇವೆ ಸಲ್ಲಿಸಿದ ಮಹಾನ್ ವ್ಯಕ್ತಿ ಎಂದು ಹೇಳಿದರು.

‘ಜನ್ಮ ಕೊಟ್ಟ ಭೂಮಿ ಮಂಡ್ಯ, ಕರ್ಮಭೂಮಿ ಶಿವಮೊಗ್ಗ. ಅವರು ಖುದ್ದಾಗಿ ಕಾಮಗಾರಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡುತ್ತಿದ್ದರು. ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ರೈತರ ವಿರುದ್ಧ ಕರಾಳ ಮಸೂದೆ ತಂದಾಗ ಅದನ್ನು ಮರಣ ಶಾಸನ ಎಂದು ಖಂಡಿಸಿ ಪ್ರತಿಭಟಿಸಿದ್ದು ಯಡಿಯೂರಪ್ಪ. ನೀರಾವರಿ ಯೋಜನೆಗಳನ್ನು ತಂದ ಆಧುನಿಕ ಭಗೀರಥ ಆಗಿ ಗುರುತಿಸಿಕೊಂಡಿರುವ ಅವರಿಗೆ ಅಭಿನಂದನೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆ ಇದೆ. 100 ಎಕರೆ ಜಾಗದಲ್ಲಿ ಪೆಂಡಾಲ್ ಹಾಕಲಾಗಿದೆ. 200 ಅಡಿ ಅಳತೆಯ ವೇದಿಕೆ ನಿರ್ಮಾಣವಾಗಿದೆ. ಮೇ 8ರಂದು ದಸರಾ ಹಬ್ಬದಂತೆ ಯಡಿಯೂರಪ್ಪ ಅವರ ಪುರಪ್ರವೇಶ ಮೆರವಣಿಗೆ ನಡೆಯಲಿದೆ’ ಎಂದರು.

‘ಯಡಿಯೂರಪ್ಪ ಅವರಿಗೆ ಆರೋಗ್ಯದಿಂದ ಇನ್ನಷ್ಟು ಸೇವೆ ಮಾಡುವ ಶಕ್ತಿ ದೊರಕಲಿ ಎಂದು ಹಾರೈಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್ ಕೆ. ಜಗದೀಶ್, ಬಿಜೆಪಿ ಮುಖಂಡರಾದ ವಿ.ರುದ್ರಗೌಡ, ಎಸ್.ಎಸ್. ಜ್ಯೋತಿ ಪ್ರಕಾಶ್, ಎಸ್. ದತ್ತಾತ್ರಿ, ಅಶ್ವತ್ಥನಾರಾಯಣ, ಭಾಸ್ಕರ್ ಕಾಮತ್,. ಉಂಬ್ಳೆಬೈಲು ಮೋಹನ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-44-2003728726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.