ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗಥಾನ್ ವ್ಯವಸ್ಥಿತವಾಗಿ ಆಯೋಜಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ
Last Updated 5 ಜನವರಿ 2023, 5:49 IST
ಅಕ್ಷರ ಗಾತ್ರ

ಚಿತ್ರದುರ್ಗ: ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯ ಯುವ ಸಪ್ತಾಹದ ಅಂಗವಾಗಿ ಜ.15 ರಂದು ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ‘ಯೋಗಥಾನ್’ ಆಯೋಜಿಸಲಾಗಿದೆ. ಸಾವಿರಾರು ಜನ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಬುಧವಾರ ಏರ್ಪಡಿಸಿದ್ದ ‘ಯೋಗಥಾನ್’ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲಾ ಮಟ್ಟದಲ್ಲಿ ಈ ಹಿಂದೆಯೇ ಯೋಗಥಾನ್ ಆಯೋಜಿಸಬೇಕಿತ್ತು. ಆದರೆ, ಅತಿವೃಷ್ಟಿ ಸೇರಿದಂತೆ ಹಲವು ಕಾರಣಗಳಿಂದ ಮುಂದೂಡ ಲಾಗಿತ್ತು. ಇದೀಗ ಜ. 15ರಂದು ಆಯೋಜಿಸ ಲಾಗುತ್ತಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು ಕಾರ್ಯಕ್ರಮದ ನೋಡೆಲ್ ಇಲಾಖೆಯನ್ನಾಗಿ ನಿಗದಿಪಡಿಸಲಾಗಿದೆ’ ಎಂದರು.

‘ಕಾರ್ಯಕ್ರಮಕ್ಕೆ ಈಗಾಗಲೇ ಸುಮಾರು 13,000 ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಯೋಗವನ್ನು ಒಂದು ವಿಷಯವನ್ನಾಗಿ ಪಠ್ಯಕ್ರಮದಲ್ಲಿ ಅಳವಡಿಸಿರುವುದರಿಂದ, ಕೇಂದ್ರದ ಆಯುಷ್ ಮಂತ್ರಾಲಯದ ಯೋಗ ಸರ್ಟಿಫಿಕೇಟ್‌ ಬೋರ್ಡ್ ಯೋಗ ಫಾರ್ ವೆಲ್‍ನೆಸ್‌ ಕಾರ್ಯಕ್ರಮದ ಮೂಲಕ ಯೋಗ ಬೋಧಕರು ಮತ್ತು ಯೋಗ ತರಬೇತಿ ಪಡೆದ ವಿದ್ಯಾರ್ಥಿಗಳನ್ನು ಸೃಜಿಸುವ ಗುರಿ ಹೊಂದಿದೆ’ ಎಂದರು.

‘ನಗರದ ಎಲ್ಲ ವಿದ್ಯಾರ್ಥಿ‌ ನಿಲಯ, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು, ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ನರ್ಸಿಂಗ್ ಸೇರಿದಂತೆ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳಲು ವ್ಯವಸ್ಥೆ ಮಾಡಬೇಕು. ಎನ್ಎಸ್ಎಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮದ ಯಶಸ್ವಿಗೆ ನಿಯೋಜಿಸ ಬೇಕು. ಪೊಲೀಸ್ ಇಲಾಖೆ ಯವರು ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು’ ಎಂದು ಸೂಚಿಸಿದರು.

‘ಯೋಗಥಾನ್ ಕಾರ್ಯಕ್ರಮ ಕ್ಕೆ ಕ್ರೀಡಾಂಗಣವನ್ನು ಸಜ್ಜುಗೊಳಿಸ ಲಾಗುವುದು. ಜತೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಸುಹಾಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT