ಚಿತ್ರದುರ್ಗ: ‘ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನದಿಂದ ಅಲ್ಪಸಂಖ್ಯಾತರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಅಪಾರ ಅವಕಾಶ ದೊರೆತಿವೆ. ಶೈಕ್ಷಣಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ನಾವು ಅವಕಾಶ ಪಡೆಯಲು ಸಾಧ್ಯವಾಗಿದೆ’ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ನಗರದ ಅಗಸನಕಲ್ಲು ಬಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಾತಂತ್ರ ಬಂದ ನಂತರ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರಿಗೆ ಅವಕಾಶಗಳ ಬಾಗಿಲು ತೆರೆದುಕೊಂಡಿದೆ. ನಾವು ಇಂದು ರಾಜಕೀಯವಾಗಿ ಬೆಳೆಯಲು ಕೂಡ ಸಂವಿಧಾನ ಅವಕಾಶ ನೀಡಿದೆ. ಮೊದಲು ನಮಗೆ ಅವಕಾಶಗಳು ಇರಲಿಲ್ಲ. ಹೀಗಾಗಿ ಶ್ರೇಷ್ಠ ಸಂವಿಧಾನ ಕೊಟ್ಟ ಬಿ.ಆರ್.ಅಂಬೇಡ್ಕರ್ ಅವರನ್ನು ನಾವು ಸದಾ ಕಾಲ ಸ್ಮರಣೆ ಮಾಡಬೇಕು. ಮುಸ್ಲಿಮರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಮೊದಲ ಆದ್ಯತೆ ನೀಡಬೇಕು’ ಎಂದು ಹೇಳಿದರು.

‘ಸರ್ಕಾರದ ವಿವಿಧ ಇಲಾಖೆ, ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಲವು ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಎಂಜಿನಿಯರಿಂಗ್, ಮೆಡಿಕಲ್, ನರ್ಸಿಂಗ್ ಸೇರಿದಂತೆ ವಿವಿಧ ರೀತಿಯ ಕೋರ್ಸ್ ಸೇರಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗಿದೆ. ಮಕ್ಕಳು ಅವುಗಳನ್ನು ಸದುಪಯೋಗ ಮಾಡಿಕೊಂಡು ವಿದ್ಯಾವಂತರಾಗಬೇಕು’ ಎಂದು ಸಲಹೆ ನೀಡಿದರು.

‘ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗೆ ಶಿಕ್ಷಣ ನೀಡಲು ಹಲವು ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ಚಿತ್ರದುರ್ಗದಲ್ಲೂ ಜಾಗ ಪರಿಶೀಲನೆ ನಡೆಸಲಾಗುವುದು. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಪಡೆದು ಕಾಲೇಜು ನಿರ್ಮಾಣ ಮಾಡಲಾಗುವುದು’ ಎಂದು ಹೇಳಿದರು.

ವೈಭವದ ಸ್ವಾಗತ: ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ವಕ್ಫ್ ಮಂಡಳಿ ಪದಾಧಿಕಾರಿಗಳು ವೈಭವದ ಸ್ವಾಗತ ಕೋರಿದರು. ಮುಖಂಡರು ನಗರದ ಹೊರವಲಯದಲ್ಲಿರುವ ಕ್ಯಾದಿಗೆರೆಯಲ್ಲಿ ಸ್ವಾಗತ ಕೋರಿದರು. ಚಳ್ಳಕೆರೆ ಗೇಟ್ನಿಂದ ಸಚಿವರನ್ನು ಬೈಕ್ ರ್ಯಾಲಿ ಮೂಲಕ ನಗರಕ್ಕೆ ಕರೆದುತರಲಾಯಿತು. ಸಚಿವರು ಮದಕರಿ ನಾಯಕ, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.

ಸುಲ್ತಾನಿ ಜಾಮೀಯ ಮಸೀದಿ ಬಳಿ ನಿರ್ಮಾಣಗೊಂಡಿರುವ ವಾಣಿಜ್ಯ ಮಳಿಗೆ ಕಟ್ಟಡಕ್ಕೆ ಸಚಿವರು ಚಾಲನೆ ನೀಡಿದರು. ಆಯಿಷಾ ಷರೀಫ್ ಮಸೀದಿ ಬಳಿ ನಿರ್ಮಾಣಗೊಂಡಿರುವ ಕಟ್ಟಡವನ್ನು ಉದ್ಘಾಟಿಸಿದರು. ಮೆದೇಹಳ್ಳಿ ಸಮೀಪದ ಖಬರಸ್ತಾನ್ ಆವರಣದಲ್ಲಿ ವಿವಿಧ ಕಾಮಗಾರಿ ನಡೆಸಲು ಭೂಮಿಪೂಜೆ ನೆರವೇರಿಸಿದರು. ಹೊರಪೇಟೆಯ ಆಜಂ ಮಸೀದಿ ಬಳಿಯ ವಾಣಿಜ್ಯ ಮಳಿಗೆಗಳಿಗೆ ಚಾಲನೆ ನೀಡಿದರು. ನಂತರ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಪಾಷಾ ಅವರ ನಿವಾಸದಲ್ಲಿ ಊಟ ಸೇವನೆ ಮಾಡಿದರು.

ಹೊಳಲ್ಕೆರೆ ರಸ್ತೆಯ ಮುಸ್ಲಿಂ ಹಾಸ್ಟೆಲ್ ಆವರಣದಲ್ಲಿ ನಿರ್ಮಿಸಿರುವ ಕೊಠಡಿಗಳಿಗೆ ಚಾಲನೆ ನೀಡಿದರು. ವಿವಿಧ ಮಸೀದಿಗಳಿಗೆ ತೆರಳಿ ಹೊದಿಕೆ ಸೇವೆ ಸಮರ್ಪಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಜಗಳೂರು ಶಾಸಕ ದೇವೇಂದ್ರಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ, ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಅನ್ವರ್ ಪಾಷಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ ಪೀರ್, ಮುಖಂಡರಾದ ರಹಮತ್ ಉಲ್ಲಾ, ಅಹಮದ್ ಪಾಷಾ ಸರ್ದಾರ್, ಸಾದಿಕ್ ಉಲ್ಲಾ ಇದ್ದರು.

ಅಭಿಮಾನಿಗಳಿಂದ ಡಿಸಿಎಂ ಕೂಗು

ಸಚಿವ ಜಮೀರ್ ಅಹ್ಮದ್ ಖಾನ್ ಅವರ ಮೆರವಣಿಗೆಯ ಸಂದರ್ಭದಲ್ಲಿ ಅಭಿಮಾನಿಗಳು ಕಾಂಗ್ರೆಸ್ ಕಾರ್ಯಕರ್ತರು ‘ಉಪ ಮುಖ್ಯಮಂತ್ರಿ ಜಮೀರ್ ಅಹ್ಮದ್ ಖಾನ್’ ಎಂದು ಘೋಷಣೆ ಕೂಗಿದರು. ಮುಂದಿನ ಸಚಿವ ವಿಸ್ತರಣೆ ಸಂದರ್ಭದಲ್ಲಿ ಜಮೀರ್ ಅಹ್ಮದ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಅಭಿಮಾನಿಗಳು ಮೆರವಣಿಗೆಯುದ್ದಕ್ಕೂ ಜಮೀರ್ ಅವರ ಮೇಲೆ ಹೂವಿನ ಮಳೆ ಸುರಿಸಿದರು. ಅಭಿಮಾನಿಗಳು ಹಲವು ಸಂಘಟನೆಗಳ ಮುಖಂಡರು ಅವರಿಗೆ ಬೃಹತ್ ಹಾರಗಳನ್ನು ಹಾಕಿ ಅಭಿನಂದಿಸಿದರು.