ಚಿತ್ರದುರ್ಗ: ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮಿ ಪ್ರಕಾಶ್ ಅವಿರೋಧವಾಗಿ ಆಯ್ಕೆಯಾದರು. ಹೊಸದುರ್ಗ ತಾಲ್ಲೂಕಿನ ಮಾಡದಕೆರೆ ಕ್ಷೇತ್ರವನ್ನು ಇವರು ಪ್ರತಿನಿಧಿಸುತ್ತಿದ್ದಾರೆ.

ಮೊಳಕಾಲ್ಮುರು ತಾಲ್ಲೂಕು ರಾಂಪುರ ಕ್ಷೇತ್ರದ ಎನ್.ಪಿ.ಸುಶೀಲಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರ ಚುನಾವಣೆ ನಿಗದಿಯಾಗಿತ್ತು. ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ಪೂರ್ಣಗೊಳಿಸಿದರು. ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.

ಕಾಂಗ್ರೆಸ್ ಪಕ್ಷದ ಸದಸ್ಯೆ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದರಿಂದ ಕೈ ಪಾಳಯದಲ್ಲಿ ಸಂಭ್ರಮ ಕಾಣಿಸಿಕೊಂಡಿತು. ಕಾಂಗ್ರೆಸ್ ಮುಖಂಡರು ಹಾಗೂ ಜನಪ್ರತಿನಿಧಿಗಳು ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿದರು. 37 ಸದಸ್ಯ ಬಲದ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ 23, ಬಿಜೆಪಿ 10, ಜೆಡಿಎಸ್ 2 ಹಾಗೂ ಇಬ್ಬರು ಪಕ್ಷೇತರು ಇದ್ದಾರೆ.

ಚುನಾವಣೆ ಪ್ರಕ್ರಿಯೆ ಬೆಳಿಗ್ಗೆಯಿಂದಲೇ ಆರಂಭವಾದವು. ಬೆಳಿಗ್ಗೆ 9ರಿಂದ 10ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ವಿಜಯಲಕ್ಷ್ಮಿ ಎರಡು ನಾಮಪತ್ರಗಳನ್ನು ಸಲ್ಲಿಕೆ ಮಾಡಿದರು. ನಿಗದಿತ ಅವಧಿಯಲ್ಲಿ ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಪರಿಶೀಲನೆ ನಡೆಸಿದ ಚುನಾವಣಾಧಿಕಾರಿ ನಾಮಪತ್ರ ಉರ್ಜಿತವಾಗಿವೆ ಎಂಬುದನ್ನು ದೃಢಪಡಿಸಿದರು. ಆಗಲೇ ಅವಿರೋಧ ಆಯ್ಕೆ ಬಹುತೇಕ ಖಚಿವಾಗಿತ್ತು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಧ್ಯಾಹ್ನ 12ಕ್ಕೆ ಮತದಾನ ಪ್ರಕ್ರಿಯೆ ಆರಂಭವಾಯಿತು. 37 ಸದಸ್ಯರ ಪೈಕಿ 28 ಸದಸ್ಯರು ಸಭೆಗೆ ಹಾಜರಾಗಿದ್ದರು. ಕೋರಂ ಇರುವುದನ್ನು ಖಚಿತಪಡಿಸಿಕೊಂಡ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ಸಭೆಗೆ ಅನುಮತಿ ನೀಡಿದರು. ವಿಜಯಲಕ್ಷ್ಮಿ ಅವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಣೆ ಮಾಡಿದರು.

ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ವಿದ್ಯಾಕುಮಾರಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಯೋಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಸಂಗಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.