ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ವಿಚಾರಧಾರೆ ಅಳವಡಿಸಿಕೊಳ್ಳಿ: ಜಿಲ್ಲಾ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ

ಅಂಬೇಡ್ಕರ್ ಜಯಂತ್ಯುತ್ಸವ
Last Updated 30 ಏಪ್ರಿಲ್ 2019, 12:02 IST
ಅಕ್ಷರ ಗಾತ್ರ

ಚಿತ್ರದುರ್ಗ: ಅಂಬೇಡ್ಕರ್ ಅವರ ವಿಚಾರ-ಧಾರೆಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆಯಿಂದ ಬಾಳಬೇಕಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ ಸಲಹೆ ನೀಡಿದರು.

ವಕೀಲರ ಭವನದಲ್ಲಿ ಮಂಗಳವಾರ ವಕೀಲರ ಸಮುದಾಯದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಅವರ 128ನೇ ಜಯಂತ್ಯುತ್ಸವದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು.

‘ಅಂಬೇಡ್ಕರ್‌ ಬಾಲ್ಯದಲ್ಲಿಯೇ ಸಾಕಷ್ಟು ನೋವು, ಹಿಂಸೆ, ಅವಮಾನ ಅನುಭವಿಸಿದ್ದರಿಂದ ದೇಶದಲ್ಲಿ ತುಳಿತಕ್ಕೆ ಒಳಗಾದವರನ್ನು ಮೇಲಕ್ಕೆತ್ತಲು ಜೀವನ ಪರ್ಯಂತ ಹೋರಾಡಿ, ಸಂವಿಧಾನವನ್ನು ಕೊಡುಗೆಯಾಗಿ ನೀಡುವ ಮೂಲಕ ಪ್ರಜೆಗಳಿಗೆ ಹಕ್ಕುಗಳನ್ನು ನೀಡಿದರು’ ಎಂದರು.

‘ದೇಶದಲ್ಲಿ ಎಲ್ಲರೂ ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸಿದಾಗ ಮಾತ್ರ ಅಂಬೇಡ್ಕರ್‌ ಅವರ ಆಶಯಗಳು ಈಡೇರಲು ಸಾಧ್ಯ. ರಾಷ್ಟ್ರದ ಪ್ರಗತಿಗೆ ವಿದ್ಯೆ ಪೂರಕವೂ ಹೌದು’ ಎಂದು ಸಲಹೆ ನೀಡಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಎನ್.ಬಿ.ವಿಶ್ವನಾಥ್, ‘ಅಂಬೇಡ್ಕರ್ ಜೀವಮಾನ ಸಾಧನೆ ಬಣ್ಣಿಸಲು ಸಾಧ್ಯವಿಲ್ಲ. ಅವರ ಆದರ್ಶಗಳನ್ನು ಪಾಲಿಸಿದಾಗ ನಿಜವಾಗಿಯೂ ಜಯಂತ್ಯುತ್ಸವ ಅರ್ಥಪೂರ್ಣ’ ಎಂದು ಹೇಳಿದರು.

ವಕೀಲ ಬೀಸ್ನಳ್ಳಿ ಜಯಣ್ಣ, ‘ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಹೋರಾಟ ಮಾಡಿದವರಲ್ಲಿ ಅಂಬೇಡ್ಕರ್ ಕೂಡ ಪ್ರಮುಖರು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸದೇ ಎಲ್ಲರೂ ಸ್ಮರಿಸಬೇಕು’ ಎಂದು ಮನವಿ ಮಾಡಿದರು.

ನ್ಯಾಯಾಧೀಶರಾದ ವೀರಣ್ಣ, ಶಿವಣ್ಣ, ಸಂದೇಶ್ ಭಂಡಾರಿ, ನಂದ್ಯಾಲ್ ಸಮೀರ್, ವಕೀಲ ಬಿ.ಕೆ.ರಹಮತ್‌ವುಲ್ಲಾ, ವಕೀಲರ ಸಂಘದ ಅಧ್ಯಕ್ಷ ವಿಜಯಕುಮಾರ್, ಉಪಾಧ್ಯಕ್ಷ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅನಿಲ್‌ಕುಮಾರ್, ಖಜಾಂಚಿ ಪ್ರಸನ್ನಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT