ಚಿತ್ರದುರ್ಗ: ಕುಡಿಯುವ ನೀರು ಮತ್ತು ಸಮರ್ಪಕ ಚರಂಡಿ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ನಗರಸಭೆ ವಿಫಲವಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ 12ನೇ ವಾರ್ಡ್ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಧರಣಿ ನಡೆಸಿದರು.

ಚೋಳಗುಡ್ಡ ಸುತ್ತಮುತ್ತ ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತದೆ. ಕೆಲವೊಮ್ಮೆ ಅದೂ ಕಷ್ಟ. ಇದರಿಂದ ನಾಗರಿಕರು ಪರದಾಡಬೇಕಾಗಿದೆ. ಬೇಸಿಗೆಯ ಈ ದಿನಗಳಲ್ಲಿ ಬಡಾವಣೆಯ ನಿವಾಸಿಗಳು ನೀರಿಲ್ಲದೆ ತೀವ್ರ ತೊಂದರೆ ಅನುಭವಿಸಬೇಕಾಗಿದೆ. ಆದರೆ, ನಗರಸಭೆ ನಿರ್ಲಕ್ಷ್ಯ ಧೋರಣೆ ತಳೆದಿದೆ. ಬಡಾವಣೆಯ ಸಮಸ್ಯೆಗಳನ್ನು ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಈ ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ನಿಯಮಿತವಾಗಿ ಚರಂಡಿಗಳನ್ನು ಸ್ವಚ್ಛಗೊಳಿಸುವುದಿಲ್ಲ. ಕಸ ವಿಲೇವಾರಿಯನ್ನೇ ಈ ಪ್ರದೇಶದಲ್ಲಿ ಕೈಗೊಳ್ಳುತ್ತಿಲ್ಲ. ಇದರಿಂದ ಕಸದ ರಾಶಿ ಸೃಷ್ಟಿಯಾಗಿ ಸೊಳ್ಳೆ ಮತ್ತು ಹಂದಿಗಳ ತಾಣವಾಗುತ್ತಿದ್ದು, ರೋಗರುಜಿನಗಳು ಹರಡಲು ಕಾರಣವಾಗಿದೆ. ಸ್ವಚ್ಛತೆ ಕಾಪಾಡಲು ನಗರಸಭೆಗೆ ಸೂಚಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ನಾಗರಿಕರ ಸಮಸ್ಯೆಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಒತ್ತಾಯಿಸಿದರು.

ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಸಬೇಕು. ತಿಂಗಳಿಗೆ ಒಮ್ಮೆಯಾದರೂ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು, ರಸ್ತೆಗಳನ್ನು ದುರಸ್ತಿಪಡಿಸಬೇಕು ಎಂದು ಜಿಲ್ಲಾಧಿಕಾರಿಗೆ ಬೇಡಿಕೆಗಳ ಮನವಿ ಸಲ್ಲಿಸಿದರು.

ಧರಣಿಯಲ್ಲಿ ಜಬೀವುಲ್ಲಾ, ತಿಪ್ಪೇಸ್ವಾಮಿ, ಷಫಿವುಲ್ಲಾ, ಸರ್ದಾರ್, ಗುಹೇಶ್ವರಪ್ಪ, ಪ್ರೇಮಾ, ನೇತ್ರಾ, ಮಂಜುಳಾ, ಲಲಿತಮ್ಮ, ಶಾರದಮ್ಮ, ಸಿದ್ದಮ್ಮ, ಯಶೋಧಮ್ಮ, ಟಿ. ಶಿವಮೂರ್ತಿ, ಟಿ. ವೀಣಾ, ನೀಲಮ್ಮ, ಬಿ.ಆರ್. ಸಂಧ್ಯಾ, ಸೀಮಾ, ಶಕುಂತಲಮ್ಮ, ಕಲಾವತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.