ಚಿತ್ರದುರ್ಗ: ಮನುಷ್ಯನ ಆರೋಗ್ಯ ಮತ್ತು ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತಿರುವ ತಂಬಾಕಿನ ವಿವಿಧ ರೀತಿಯ ಉತ್ಪನ್ನಗಳನ್ನು ಸರ್ಕಾರ ನಿಷೇಧಿಸುವ ಬಗ್ಗೆ ಚಿಂತನೆ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಿಸಬೇಕು ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ಹರೀಶ್ ಕುಮಾರ್ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಡೇಟ್ ಚಾರಿಟೇಬಲ್ ನಿಯಂತ್ರಣ ಘಟಕದ ಆಶ್ರಯದಲ್ಲಿ ಗುರುವಾರ ನಗರದ ನ್ಯಾಯಾಲಯದ ಆವರಣದ ವಕೀಲರ ಭವನದಲ್ಲಿ ಹಮ್ಮಿಕೊಂಡಿದ್ದ `ವಿಶ್ವ ತಂಬಾಕು ರಹಿತ ದಿನ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಪಂಚದಲ್ಲಿ ಪ್ರತಿ ವರ್ಷ ತಂಬಾಕು ಸೇವನೆಯಿಂದಾಗಿ ಸುಮಾರು 5.4 ಮಿಲಿಯನ್ ಜನರು ಸಾವನ್ನಪ್ಪುತ್ತಿದ್ದಾರೆ. ಈ ಸಾವು ನೋವುಗಳು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿವೆ. ಮನುಷ್ಯನ ಸಾವಿಗೆ 8 ಕಾರಣಗಳಲ್ಲಿ ತಂಬಾಕು ಸೇವನೆಯೂ ಒಂದಾಗಿದೆ. ಭಾರತದಲ್ಲಿ ತಂಬಾಕಿನ ವ್ಯಾಮೋಹಕ್ಕೆ ಒಳಗಾಗಿ ಪ್ರತಿ ವರ್ಷ 8 ರಿಂದ 9 ಲಕ್ಷ ಜನ ಸಾವನ್ನಪ್ಪುತ್ತಿದ್ದಾರೆ. 25 ರಿಂದ 70ವಯಸ್ಸಿನವರೇ ಹೆಚ್ಚಿನ ಸಂಖ್ಯೆಯಲ್ಲಿ ತಂಬಾಕು ಸೇವಿಸುತ್ತಿದ್ದಾರೆ. ತಂಬಾಕು ಸೇವನೆ ನಿಯಂತ್ರಿಸಲು ಸರ್ಕಾರ ಕಾಯ್ದೆ ಮಾಡಿದ್ದರೂ ಸರಿಯಾಗಿ ಪಾಲಿಸುತ್ತಿಲ್ಲ ಎಂದು ವಿಷಾದಿಸಿದರು.

ಜಹಾಂಗೀರನ ಕಾಲದಲ್ಲಿ ತಂಬಾಕು ಬೆಳೆ ನಿಷೇಧಿಸಲಾಗಿತ್ತು. ಭಾರತಕ್ಕೆ ತಂಬಾಕು ಬೆಳೆ ಪೋರ್ಚುಗೀಸರಿಂದ ಬಂದಿದೆ. ತಂಬಾಕಿನ ಉತ್ಪನ್ನಗಳನ್ನು ಸೇವಿಸುವವರಲ್ಲಿ ಅನಕ್ಷರಸ್ಥರಿಗಿಂತ ಅಕ್ಷರಸ್ಥರ ಸಂಖ್ಯೆ ಹೆಚ್ಚಾಗಿದೆ. ಇವರನ್ನು ವಿದ್ಯಾವಂತರೆಂದು ಹೇಳಲು ಸಾಧ್ಯವಿಲ್ಲ ಎಂದರು.

ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ.ಜಯಮ್ಮ ಮಾತನಾಡಿ, ಈ ವರ್ಷ ಸರ್ಕಾರ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ `ತಂಬಾಕು ದುಷ್ಪರಿಣಾಮ ಜಾಹಿರಾತು, ಉತ್ತೇಜನ ಮತ್ತು ಪ್ರಾಯೋಜಕತ್ವ ನಿಷೇಧ' ಎನ್ನುವ ಘೋಷಣೆಯನ್ನು ಮಾಡಿದೆ. ತಂಬಾಕು ಸೇವಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. 2020ರ ವೇಳೆಗೆ ಇದು ಪ್ರಪಂಚದಲ್ಲಿ 1.50 ಮಿಲಿಯನ್ ಉಂಟಾಗುವ ನಿರೀಕ್ಷೆಯಿದೆ. ತಂಬಾಕು ನಿಯಂತ್ರಣಕ್ಕೆ ರಾಜ್ಯದಲ್ಲಿ 2003ರಲ್ಲಿ ಕಾಯ್ದೆ ಜಾರಿಯಾಗಿದ್ದು, 2004ರಲ್ಲಿ ಅನುಷ್ಠಾನವಾಯಿತು. 2013ರಲ್ಲಿ ಇದುವರೆಗೂ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರ ವಿರುದ್ಧ 69 ಪ್ರಕರಣಗಳನ್ನು ದಾಖಲಿಸಿ ದಂಡ ಹಾಕಲಾಗಿದೆ ಎಂದರು.

ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ ಮಾತನಾಡಿ, ಸಿಗರೇಟ್ ಸೇವನೆ ಕೇವಲ ಸಾರ್ವಜನಿಕ ಸ್ಥಳದಲ್ಲಿ ಮಾತ್ರವೇ ನಿಷೇಧ ಮಾಡುವ ಬದಲಿಗೆ ಸಂಪೂರ್ಣವಾಗಿ ನಿಷೇಧ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.

ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಹಂಚಾಟೆ ಸಂಜೀವ ಕುಮಾರ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸದಾಶಿವ ಸುಲ್ತಾನಿಪುರಿ, `ಡೇಟ್' ಚಾರಿಟೇಬಲ್ ನಿಯಂತ್ರಣ ಘಟಕದ ಅಧ್ಯಕ್ಷ ಡಾ.ಶಿವಣ್ಣ, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ನಾಗರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಕಾಶೀನಾಥ್ ಪವಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಸ್.ಆರ್. ಮಹಾಲಿಂಗಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಜಿ.ಕೃಷ್ಣಮೂರ್ತಿ, ಕಾರ್ಯದರ್ಶಿ ವಿ.ಅಶೋಕ್ ಉಪಸ್ಥಿತರಿದ್ದರು. ಭಾಗೀರಥಿ ಪ್ರಾರ್ಥಿಸಿದರು. ಶ್ರೀಧರಮೂರ್ತಿ ಸ್ವಾಗತಿಸಿದರು. ಶಿವು ಯಾದವ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.