ಚಿತ್ರದುರ್ಗ: ದೌರ್ಜನ್ಯ, ಕಿರುಕುಳ ಸೇರಿದಂತೆ ಇತರ ದುಷ್ಕೃತ್ಯಗಳಿಂದ ರಕ್ಷಿಸಿಕೊಳ್ಳಲು ದೇಶದ ಪ್ರತಿಯೊಬ್ಬ ಪ್ರಜೆಗೂ ಕಾನೂನಿನ ಅರಿವು ಅಗತ್ಯ. ಈ ನಿಟ್ಟಿನಲ್ಲಿ ಕಾರ್ಮಿಕರಿಗೆ ಅನ್ಯಾಯವಾದರೆ, ಅದನ್ನು ಮೆಟ್ಟಿನಿಂತು ನ್ಯಾಯ ಪಡೆಯುವುದಕ್ಕಾಗಿ ಜಾಗೃತಿ ಮೂಡಿಸಲು ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ಎ.ಮೋಹನ್ ತಿಳಿಸಿದರು.

ನಗರದ ಐಎಂಎ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಕಟ್ಟಡ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ‘ಕಾನೂನು ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಜಿಲ್ಲೆಯಲ್ಲಿ ಎಷ್ಟು ಮಂದಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿದ್ದಾರೆ. ಅವರಲ್ಲಿ ಎಷ್ಟು ಕಾರ್ಮಿಕರು ಈಗಾಗಲೇ ಇಲಾಖೆಯಲ್ಲಿ ಹೆಸರು ನೋಂದಾಯಿಸಿ ಸರ್ಕಾರದ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಜತೆಗೆ ಅವರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸುವ ಕಾರ್ಯ ನಡೆಯುತ್ತಿದೆಯೇ ಎನ್ನುವ ಕುರಿತು ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸಿ.ಶಿವುಯಾದವ್ ಮಾತನಾಡಿ, ಬಹುತೇಕ ಕಡೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಭದ್ರತೆಯೂ ಇಲ್ಲ. ಜತೆಗೆ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿಯೂ ಇಲ್ಲವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿರುವ ಎಲ್ಲ ಕಾರ್ಮಿಕರಿಗೆ ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಕಾನೂನಿನ ಅರಿವು ಮತ್ತು ಸರ್ಕಾರದ ಸೌಲಭ್ಯಗಳ ಬಗ್ಗೆ ಮಾಹಿತಿ ಒದಗಿಸುವ ಕೆಲಸ ಆಗಬೇಕಿದೆ ಎಂದರು.

ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೂ ಎಲ್ಲ ಸೌಕರ್ಯಗಳು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆ ವಿವಿಧೆಡೆ ಜೆಸಿಬಿ ಯಂತ್ರದ ಕೈಗೆ ಸಿಲುಕಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದೆ. ಈ ರೀತಿ ಆಗದಂತೆ ಸಂಘ ಮತ್ತು ಕಾರ್ಮಿಕ ಇಲಾಖೆ ಮುಂಜಾಗ್ರತೆ ವಹಿಸಬೇಕು ಎಂದರು.

ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ವೈ.ಕುಮಾರ್ ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ಸಕಾಲದಲ್ಲಿ ಸಿಗದಿರಲು ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯೇ ಪ್ರಮುಖ ಕಾರಣ. ಆದ್ದರಿಂದ ಕೂಡಲೇ ಅಗತ್ಯ
ಸಿಬ್ಬಂದಿ ಭರ್ತಿಗೆ ಸರ್ಕಾರ ಮುಂದಾಗಬೇಕಿದೆ ಎಂದರು.

ವಕೀಲ ಜಿ.ಎಂ.ಉಮಾಪತಿ ಮಾತನಾಡಿ, ಕಾನೂನಿನಲ್ಲಿರುವ ಎಲ್ಲ ಅಂಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎನ್ನುವ ನಿಯಮವಿಲ್ಲ. ಆದರೆ, ದೇಶದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ಕಡಿಮೆ ಮಾಡುವುದಕ್ಕಾಗಿಯಾದರೂ ಕೆಲ ಅಗತ್ಯ ಕಾನೂನಿನ ಅಂಶಗಳನ್ನು ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.

ಕಾರ್ಮಿಕರ ದುಡಿಮೆಗೆ ತಕ್ಕಂತೆ ಅವರಿಗೆ ದಿನಗೂಲಿ ಸಿಗುತ್ತಿಲ್ಲ. ಪ್ರತಿನಿತ್ಯ ದೈಹಿಕ ಶ್ರಮವಹಿಸಿ ಕೆಲಸ ಮಾಡುವ ಕಾರ್ಮಿಕರಿಗೆ ಸರ್ಕಾರದ ನೌಕರರಿಗೆ ಸಿಗುವಂತಹ ಕನಿಷ್ಠ ವೇತನ ಸಿಗುವಂತಾಗಬೇಕಾದರೆ ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯಬೇಕು ಎಂದು ಹೇಳಿದರು.

ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಗುರುಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಸಹಾಯಕ ಕಾರ್ಮಿಕ ಆಯುಕ್ತರಾದ ವೀಣಾ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ವಿ.ಅಶೋಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.