ಚಿತ್ರದುರ್ಗ: ಇದೇ 29ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಿರಿಯೂರಿಗೆ ಬರಲಿದ್ದು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಲಿದ್ದಾರೆ.

‘ಅಮಿತ್ ಶಾ ಮೂರನೇ ಬಾರಿಗೆ ಜಿಲ್ಲೆಗೆ ಬರುತ್ತಿದ್ದಾರೆ. 29ರಂದು ಮಧ್ಯಾಹ್ನ 2 ಗಂಟೆಗೆ ಹಿರಿಯೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ಬೃಹತ್ ಪ್ರಚಾರ ಸಭೆಯಲ್ಲಿ ಶಾ ಪಾಲ್ಗೊಳ್ಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ನವೀನ್ ತಿಳಿಸಿದರು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಕಾರ್ಯಕ್ರಮದ ಸಿದ್ಧತೆಯ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದರು.

ಸಂಜೆ 4ರವರೆಗೆ ಅಭ್ಯರ್ಥಿಗಳ ಪರ ಅಮಿತ್ ಶಾ ಮತಯಾಚಿಸಲಿದ್ದಾರೆ. ಜಿಲ್ಲೆಯಾದ್ಯಂತ ಸಹಸ್ರಾರು ಕಾರ್ಯಕರ್ತರು ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ಚುನಾವಣಾ ಸಂಚಾಲಕ ಸಿದ್ದೇಶ್ ಯಾದವ್, ಮಲ್ಲಿಕಾರ್ಜುನ್, ರತ್ನಮ್ಮ, ರೇವಣಸಿದ್ದಪ್ಪ, ಬೇದ್ರೆ ನಾಗರಾಜ್, ಲೀಲಾಧರ ಇದ್ದರು.

‘ಮೋದಿ ಕಾರ್ಯಕ್ರಮ ನಿಗದಿಯಾಗಿಲ್ಲ’

ಚಿತ್ರದುರ್ಗ ಜಿಲ್ಲೆಗೆ ಪ್ರಧಾನಿ ಮೋದಿ ಬರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಅವರ ಅಧಿಕೃತ ಪ್ರವಾಸದ ಪಟ್ಟಿಯಲ್ಲಿ ಜಿಲ್ಲೆಯ ಕಾರ್ಯಕ್ರಮ ಇಲ್ಲ ಎಂದು ನವೀನ್ ಸ್ಪಷ್ಟಪಡಿಸಿದರು.

‘ಅಧಿಕೃತ ಪ್ರವಾಸದ ವೇಳಾಪಟ್ಟಿ ಪ್ರಕಾರ ಮೋದಿ ಅವರು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡುತ್ತಾರೆ. ಇದನ್ನು ಹೊರತುಪಡಿಸಿ, ಬೇರೆ ಯಾವ ಮಾಹಿತಿಯೂ ಸಿಕ್ಕಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.