ಸ್ವಚ್ಛತೆ: ಜಿಲ್ಲೆಗೆ ಮೊದಲ ಸ್ಥಾನ ನಿರೀಕ್ಷೆ

7
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಮುಲ್ಲೈ ಮುಹೆಲನ್‌ ಹೇಳಿಕೆ

ಸ್ವಚ್ಛತೆ: ಜಿಲ್ಲೆಗೆ ಮೊದಲ ಸ್ಥಾನ ನಿರೀಕ್ಷೆ

Published:
Updated:
Deccan Herald

ಕೋಡಿಹಳ್ಳಿ (ಕನಕಪುರ): ಶೌಚಾಲಯ ನಿರ್ಮಾಣ ಮತ್ತು ಸ್ವಚ್ಛತೆಯಲ್ಲಿ ಜಿಲ್ಲೆಯು ನಿರೀಕ್ಷಿತ ಗುರಿ ತಲುಪಿದೆ. ಸ್ವಚ್ಛ ಭಾರತ ಅಭಿಯಾನದಲ್ಲಿ ರಾಮನಗರಕ್ಕೆ ಮೊದಲನೇ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಮುಲ್ಲೈ ಮುಹೆಲನ್‌ ತಿಳಿಸಿದರು.

ತಾಲ್ಲೂಕಿನ ಕೋಡಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಸ್ಚಚ್ಛ ಸರ್ವೇಕ್ಷಣಾ ರಥಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ಕುಟುಂಬಕ್ಕೂ ಶೌಚಾಲಯ ನಿರ್ಮಿಸಬೇಕು. ಅದನ್ನು ಶೇಕಡ 100ರಷ್ಟು ಬಳಕೆಮಾಡಿಕೊಳ್ಳುವಂತಾಗಬೇಕೆಂದು ಎಂದು ತಿಳಿಸಿದರು.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೇಂದ್ರದ ಪರಿಶೀಲನಾ ತಂಡ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಿ ಜನರಿಂದ ಪ್ರತಿಕ್ರಿಯೆ ಪಡೆಯಲಿದೆ ಎಂದು ತಿಳಿಸಿದರು.

ಉತ್ತಮವಾಗಿ ನಿರ್ವಹಣೆ ಮಾಡಿದ ಪಂಚಾಯಿತಿ ಮತ್ತು ಜಿಲ್ಲೆಯನ್ನು ಆಯ್ಕೆ ಮಾಡಲಾಗುವುದು. ಕಾರ್ಯಕ್ರಮದ ಜನ ಜಾಗೃತಿಗಾಗಿ ಸ್ವಚ್ಛ ಸರ್ವೇಕ್ಷಣ ರಥ ಪ್ರತಿ ಗ್ರಾಮದಲ್ಲೂ ಸಂಚರಿಸಲಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ ಕಾರ್ಯಕ್ರಮದ ಬಗ್ಗೆ ಜನರಿಗೆ ತಿಳಿಸಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದರು.

‘ನಿಮ್ಮ ಗ್ರಾಮಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ‘ಸ್ವಚ್ಛ ಮೇವ ಜಯತೆ’ ಎಂಬ ಘೋಷ ವಾಕ್ಯದಡಿ ಈ ಆಂದೋಲನ ಜಿಲ್ಲಾ ವ್ಯಾಪ್ತಿಯಲ್ಲಿ ನಡೆಯುತ್ತಿದೆ’ ಎಂದರು.

ಶಾಲಾ ಮಕ್ಕಳು ತಮ್ಮ ಮನೆಗಳಲ್ಲಿ ಜಾಗೃತಿ ಮೂಡಿಸಬೇಕು. ಶೌಚಾಲಯ ಬಳಕೆ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಿ ಶೇ 100 ಬಯಲು ಮುಕ್ತ ಶೌಚಾಲಯವನ್ನಾಗಿ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸ್ವಚ್ಛ ಪರಿಸರ ಹಾಗೂ ಶೌಚಾಲಯ ಬಳಕೆ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಸಬಾ ಹೋಬಳಿ ಟಿ.ಬೇಕುಪ್ಪೆ ಸರ್ಕಲ್‌ನಲ್ಲಿರುವ ಸರ್ಕಾರಿ ಶಾಲೆ ಆವರಣದಲ್ಲೂ ಸ್ವಚ್ಛ ಸರ್ವೇಕ್ಷಣಾ ರಥಕ್ಕೆ ಚಾಲನೆ ನೀಡಲಾಯಿತು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿ ಟಿ.ಕೆ.ಶಿವರಾಮು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಎಸ್‌.ಯತಿಕುಮಾರ್‌, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಬಸಪ್ಪ, ಕೋಡಿಹಳ್ಳಿ ಪಂಚಾಯಿತಿ ಅಧ್ಯಕ್ಷ ವೆಂಕಟರಾಮೇಗೌಡ, ಪಿ.ಡಿ.ಒ. ಕೃಷ್ಣಮೂರ್ತಿ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !