ಶುಕ್ರವಾರ, ಏಪ್ರಿಲ್ 10, 2020
19 °C

ಈ ಬಾರಿ ಇತಿಮಿತಿಯ ಬಜೆಟ್: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಹಣಕಾಸಿನ ಇತಿಮಿತಿಯ ಮಧ್ಯೆ ಈ ಬಾರಿಯ ಬಜೆಟ್‌ ಮಂಡನೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಭಾನುವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಲಭ್ಯ ಸಂಪನ್ಮೂಲ ಬಳಕೆ ಮಾಡಿಕೊಂಡು ಉತ್ತಮ ಬಜೆಟ್ ಮಂಡಿಸಲು ಪ್ರಯತ್ನಿಸಿರುವೆ. ಕೃಷಿ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಹೊಸ ಕೈಗಾರಿಕೆಗಳನ್ನು ತರುವ ಪ್ರಯತ್ನ ನಡೆದಿದೆ. ಅದಕ್ಕೆ ಪೂರಕವಾಗಿ ವಿಮಾನ ನಿಲ್ದಾಣ ಅಭಿವೃದ್ಧಿಗೆ ಹಣ ನೀಡಲಾಗಿದೆ.  ಸಿಗಂಧೂರು ಸೇತುವೆ ಸೇರಿದಂತೆ ಮೂರು ವರ್ಷಗಳಲ್ಲಿ ಎಲ್ಲ ಅಭಿವೃದ್ಧಿ ಯೋಜನೆಗಳನ್ನೂ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಹಣಕಾಸು ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಕಡಿಮೆಯಾಗಿದೆ ಎಂಬ ಪ್ರಶ್ನೆಗೆ, ‘ಸರಿ ಪಡಿಸಿಕೊಳ್ಳುತ್ತೇವೆ’ ಎಂದಷ್ಟೇ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು