ಮೋದಿ ಸರ್ಕಾರಕ್ಕಿರುವ ದರಿದ್ರ ನಮ್ಮ ಸರ್ಕಾರಕ್ಕಿಲ್ಲ: ಸಿಎಂ ಕುಮಾರಸ್ವಾಮಿ

ವಿಜಯಪುರ: ‘ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕಿರುವ ದರಿದ್ರ ನಮ್ಮ ಸರ್ಕಾರಕ್ಕಿಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
‘ಮೋದಿ ನೇತೃತ್ವದ ಸರ್ಕಾರ ಜನ ಸಾಮಾನ್ಯರಿಗೆ ಏನೊಂದು ಕೊಡುಗೆ ನೀಡಲಿಲ್ಲ. ನಮ್ಮ ಸರ್ಕಾರ ಸಕಲವನ್ನು ಕರುಣಿಸಿದೆ’ ಎಂದು ನಗರದಲ್ಲಿ ಶುಕ್ರವಾರ ರಾತ್ರಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ತಿರುಗೇಟು ನೀಡಿದರು.
ಮೋದಿ ಬಾಗಲಕೋಟೆಯಲ್ಲಿ ರಾಜ್ಯ ಸರ್ಕಾರವನ್ನು ದುರ್ಬಲ ಸರ್ಕಾರ ಎಂದು ಜರಿದಿದ್ದಕ್ಕೆ ಕುಮಾರಸ್ವಾಮಿ, ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಸಾಧನೆಗಳನ್ನು ಸರಣಿಯೋಪಾದಿಯಾಗಿ ಬಣ್ಣಿಸಿದರು. ಮೋದಿ ಪತ್ರಿಕೆಗಳಲ್ಲಷ್ಟೇ ಇದ್ದಾರೆ. ನಿಜವಾಗಿ ಜನರ ಪರ ಕೆಲಸ ಮಾಡುತ್ತಿರುವವರು ನಾವು ಎಂದು ಹೇಳಿದರು.
‘ರಾಜ್ಯದ ಸಮ್ಮಿಶ್ರ ಸರ್ಕಾರ ರೈತರ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲವನ್ನು ಮನ್ನಾ ಮಾಡಿದೆ. ಆದರೆ ಮೋದಿ ಸರ್ಕಾರ ತಮ್ಮ ಅಧೀನದಲ್ಲಿರುವ ಬ್ಯಾಂಕ್‌ಗಳ ಮೂಲಕ ಸಾಲಗಾರ ರೈತರಿಗೆ ನೋಟಿಸ್ ಕೊಡಿಸುತ್ತಿದೆ. ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ರೈತ ಸಮೂಹ ಈ ನಿಟ್ಟಿನಲ್ಲಿ ಜಾಗೃತರಾಗಬೇಕಿದೆ’ ಎಂದು ಎಚ್‌ಡಿಕೆ ಮನವಿ ಮಾಡಿದರು.
ಗೃಹ ಸಚಿವ ಎಂ.ಬಿ.ಪಾಟೀಲ, ಆರೋಗ್ಯ ಸಚಿವ ಶಿವಾನಂದ ಪಾಟೀಲ ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಮನಗೂಳಿ, ಸಹಕಾರ ಸಚಿವ ಬಂಡೆಪ್ಪ ಕಾಶಂಪುರ, ನಾಗಠಾಣ ಶಾಸಕ ದೇವಾನಂದ ಚವ್ಹಾಣ, ಮೈತ್ರಿ ಅಭ್ಯರ್ಥಿ ಸುನೀತಾ ದೇವಾನಂದ ಚವ್ಹಾಣ, ಮಾಜಿ ಸಚಿವ ರೇವುನಾಯಕ ಬೆಳಮಗಿ, ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ಪ್ರಕಾಶ ರಾಠೋಡ, ಮಾಜಿ ಶಾಸಕ ಪ್ರೊ.ರಾಜು ಆಲಗೂರ, ವಿಠ್ಠಲ ಕಟಕದೊಂಡ, ಬಿ.ಜಿ.ಪಾಟೀಲ ಹಲಸಂಗಿ ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.